ಕೊಪ್ಪ: ತಾಲೂಕಿನ ಅಸಗೋಡು ಗ್ರಾಪಂ ವ್ಯಾಪ್ತಿಯ ಕಂಚೀತೋಟ ಬಸ್ ನಿಲ್ದಾಣದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರಲ್ಲಿ ತೀವ್ರ ಆತಂಕ ಮೂಡಿಸಿದೆ.
ಕೊಪ್ಪ: ತಾಲೂಕಿನ ಅಸಗೋಡು ಗ್ರಾಪಂ ವ್ಯಾಪ್ತಿಯ ಕಂಚೀತೋಟ ಬಸ್ ನಿಲ್ದಾಣದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರಲ್ಲಿ ತೀವ್ರ ಆತಂಕ ಮೂಡಿಸಿದೆ.
ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬಂದು ಕುಳಿತಿದ್ದ ಚಿರತೆಯನ್ನು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಪ್ರಯಾಣಿ ಕರೊಬ್ಬರು ಗಮನಿಸಿ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ವಾಹನದ ಬೆಳಕಿಗೆ ಚಿರತೆ ರಸ್ತೆ ಬದಿಯಲ್ಲಿ ಕುಳಿ ತಿರುವ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಕಂಚೀತೋಟ ಬಸ್ ನಿಲ್ದಾಣದ ಸುತ್ತಮುತ್ತ ಜನವಸತಿ ಪ್ರದೇಶವಿದ್ದು, ನಿತ್ಯವೂ ನೂರಾರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ರಾತ್ರಿ ಹಾಗೂ ಮುಂಜಾನೆ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಅತ್ಯಂತ ಎಚ್ಚರಿಕೆಯಿಂದ ಓಡಾಡುವಂತೆ ಸೂಚಿಸಲಾಗಿದೆ.
ಇತ್ತೀಚೆಗೆ ಕೊಪ್ಪ ತಾಲೂಕಿನ ಸುತ್ತಮುತ್ತ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟುಮಾಡಿದೆ. ಕಾಡುಕೋಣ, ಚಿರತೆ ಸೇರಿದಂತೆ ವನ್ಯಮೃಗಗಳು ನಿರಂತರವಾಗಿ ಜನವಸತಿ ಪ್ರದೇಶ ಹಾಗೂ ಹೆದ್ದಾರಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಜನರ ನಿದ್ದೆಗೆಡಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕೂಡಲೇ ಎಚ್ಚೆತ್ತು ಸೂಕ್ತ ಕ್ರಮವಹಿಸಬೇಕು ಮತ್ತು ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.