ಸೂಲಿಬೆಲೆ: ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಶೈಕ್ಷಣಿಕವಾಗಿ ಹೊಸ ದಿಕ್ಕನತ್ತ ಸಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಚಿತ್ತ ಹರಿಸಬೇಕು. ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಕರೆ ನೀಡಿದರು

ಸೂಲಿಬೆಲೆ: ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಶೈಕ್ಷಣಿಕವಾಗಿ ಹೊಸ ದಿಕ್ಕನತ್ತ ಸಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಚಿತ್ತ ಹರಿಸಬೇಕು. ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಕರೆ ನೀಡಿದರು.

ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಕೊಠಡಿಗಳು, ಕಂಪ್ಯೂಟರ್ ಲ್ಯಾಬ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಪದವಿ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ೬ ಕೊಠಡಿಗಳು, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್‌ಗೆ ೩೦ ಕಂಪ್ಯೂಟರ್ ವ್ಯವಸ್ಥೆ, ಉತ್ತಮ ಗ್ರಂಥಾಲಯಗಳನ್ನು ಒದಗಿಸಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ಉತ್ತಮ ಫಲಿತಾಂಶ ನೀಡಬೇಕು ಎಂದು ಹೇಳಿದರು.

ಪ್ರಾಂಶುಪಾಲರಾದ ಡಾ.ಕಲ್ಪನಾ ಮಾತನಾಡಿ, ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾದ ಬಿ.ವಿ.ಸತೀಶಗೌಡರು ಕೊಡುಗೈ ದಾನಿಯಾಗಿದ್ದು ಕಾಲೇಜಿನ ಮೂಲ ಸೌಕರ‍್ಯಗಳಿಗೆ ವೈಯಕ್ತಿವಾಗಿ ಹೆಚ್ಚಿನ ಸಹಾಯ ಮಾಡಿದ್ದಾರೆ ಎಂದರು.

ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವ್ಯವಸ್ಥೆಗಳನ್ನು ವೈಯಕ್ತಿಕವಾಗಿ ನೀಡುತ್ತಿದ್ದೇವೆ ಎಂದರು.ಇದೇ ವೇಳೆ ಬಮೂಲ್ ನಿರ್ದೆಶಕ ಬಿ.ವಿ.ಸತೀಶಗೌಡರು ವೈಯಕ್ತಿಕವಾಗಿ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಒದಗಿಸಿಕೊಡಲಾಗಿದೆ.

ಕಾರ್ಯಕ್ರಮದಲ್ಲಿ ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಯುವ ಮುಖಂಡ ನಾರಾಯಣಗೌಡ, ಟಿಎಪಿಸಿಎಂಎಸ್ ನಿರ್ದೇಶಕ ನಗರೇನಹಳ್ಳಿ ನಾಗರಾಜಪ್ಪ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಮೂರ್ತಿ, ತಾಪಂ ಮಾಜಿ ಅಧ್ಯಕ್ಷ ಡಾ.ಡಿ.ಟಿ.ವೆಂಕಟೇಶ್, ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ದನರೆಡ್ಡಿ, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರವಿಚಂದ್ರ, ಬೆಟ್ಟಹಳ್ಳಿ ಗೋಪಿನಾಥ್, ಆನಂದ್, ಭಾಗ್ಯಮ್ಮ, ಪ್ರಶಾಂತ್, ಡಾ.ಕಿರಣ್, ಜಿಯಾವುಲ್ಲಾ, ಸೈಯದ್ ಮಹಬೂಬ್, ಸಿಂಡಿಕೇಟ್ ಸದಸ್ಯ ದೇವರಾಜ್, ಉಪನ್ಯಾಸಕರಾದ ನರಸಪ್ಪ, ಚನ್ನಕೃಷ್ಣ, ಡಾ. ಅಶ್ವತ್ಥನಾರಾಯಣ್, ಡಾ. ಸಂಗೀತಾ, ವೆಂಕಟರಮಣಪ್ಪ ಇತರರಿದ್ದರು.

(ಫೋಟೋ -1 ಸುದ್ದಿ ಜೊತೆಗೆ ಬಳಸಿ ಸರ್‌)

ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ ನೆರವೇರಿಸಿದರು. ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ನಾರಾಯಣಗೌಡ ಇತರರಿದ್ದರು.

(ಫೋಟೋ -2 ಪ್ಯಾನಲ್‌ನಲ್ಲಿ ಬಳಸಿ ಸರ್‌)

ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪೊಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಶಾಸಕ ಶರತ್ ಬಚ್ಚೇಗೌಡ ಅಭಿನಂದಿಸಿದರು. ಪ್ರಾಂಶುಪಾಲರಾದ ಡಾ.ಕಲ್ಪನಾ, ಬಮೂಲ್ ನಿರ್ದೇಶಕ ಸತೀಶಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ದನರೆಡ್ಡಿ, ರವಿಚಂದ್ರ, ಬೆಟ್ಟಹಳ್ಳಿ ಗೋಪಿನಾಥ್, ಆನಂದ್, ಭಾಗ್ಯಮ್ಮ ಇತರರಿದ್ದರು.