ಸಾರಾಂಶ
Let a sports academy be established in Davangere
- 5ನೇ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ವಿನಯ್ ಕುಮಾರ್ ಇಂಗಿತ
-----ಕನ್ನಡಪ್ರಭ ವಾರ್ತೆ ದಾವಣಗೆರೆ
ಪ್ರಕಾಶ್ ಪಡುಕೋಣೆ, ದ್ರಾವಿಡ್ ಕ್ರೀಡಾ ಅಕಾಡೆಮಿಯಂತೆಯೇ ದಾವಣಗೆರೆಯಲ್ಲಿಯೂ ಒಲಂಪಿಯನ್ಸ್ ನ ಸೃಷ್ಟಿ ಮಾಡುವಂಥ ಕ್ರೀಡಾ ಅಕಾಡೆಮಿ ಸ್ಥಾಪನೆಯಾಗಬೇಕಾದ ಅವಶ್ಯಕತೆ ಇದೆ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಪ್ರತಿಪಾದಿಸಿದರು.ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆ-2024 ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು, ಸಂಸದರು ಕ್ರೀಡಾ ಅಕಾಡೆಮಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಭಾವಿಸುತ್ತೇನೆ ಎಂದರು.
ದಾವಣಗೆರೆಯಲ್ಲಿ ಕ್ರೀಡಾ ಅಕಾಡೆಮಿ ಆಗಬೇಕಾದ ಅವಶ್ಯಕತೆ ತುಂಬಾ ಇದೆ. ಇಲ್ಲಿರುವ ಮಕ್ಕಳನ್ನು ನೋಡಿದರೆ ಖುಷಿಯಾಗುತ್ತದೆ. ಸ್ಪರ್ಧಾಳುಗಳ ಪಾಲ್ಗೊಳ್ಳುವಿಕೆಯು ಉತ್ತಮ ಬೆಳವಣಿಗೆ, ಕ್ರೀಡಾಪಟುಗಳು ಪ್ರತಿಯೊಂದು ಮನೆಯಿಂದಲೂ ಹೊರ ಬರಬೇಕಿದೆ ಎಂದು ಆಶಿಸಿದರು.ಲಕ್ಷಾಂತರ ವಿದ್ಯಾರ್ಥಿಗಳು ಕರಾಟೆ ಅಭ್ಯಸಿಸಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ದಾವಣಗೆರೆಯಲ್ಲಿ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆ ನಡೆಸಲಾಗುತ್ತಿದೆ. ಇದು ದೇಶದ ಮೂಲೆ ಮೂಲೆಯನ್ನೂ ತಲುಪುವಂತಾಗಲಿ ಎಂದು ಜಿ. ಬಿ. ವಿನಯ್ ಕುಮಾರ್ ಹಾರೈಸಿದರು.
ಮಕ್ಕಳು ನೀಟ್, ಸಿಇಟಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದ ಜೊತೆಗೆ ಕರಾಟೆ, ದೇಹದಾರ್ಢ್ಯ, ಕಬಡ್ಡಿ, ಸಂಗೀತದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಿ. ಇದು ಜೀವನದ ಅವಿಭಾಜ್ಯ ಅಂಗ. ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ ಎಂದು ಕಿವಿಮಾತು ಹೇಳಿದರು.ವೇದಿಕೆಯಲ್ಲಿ ಕರಾಟೆ ಸ್ಪರ್ಧೆ ಆಯೋಜಕ ರೆನ್ಸಿ ಎಚ್. ಮಲ್ಲಿಕಾರ್ಜುನ್, ಎಚ್.ಎಂ. ಕಾರ್ತಿಕ್, ಚನ್ನಕೇಶವ, ಲೋಹಿತ್ ಕುಮಾರ್, ಸಿದ್ದೇಶ್, ರಘು, ಸುಭಾಷ್ ಎಚ್.ಪಿ., ಕರಾಟೆ ತರಬೇತುದಾರರು ಹಾಜರಿದ್ದರು.
.......8ಕೆಡಿವಿಜಿ45
ದಾವಣಗೆರೆಯಲ್ಲಿ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆಯನ್ನು ಜಿ.ಬಿ. ವಿನಯಕುಮಾರ ಉದ್ಘಾಟಿಸಿ ಶುಭ ಕೋರಿದರು.