ಸಾರಾಂಶ
ಅಂಕೋಲಾ: ತಾಲೂಕಿನ ಶೆಟಗೇರಿ ಸತ್ಯಾಗ್ರಹ ಸ್ಮಾರಕ ವಿದ್ಯಾಲಯ ಕ್ರೀಡಾಂಗಣದಲ್ಲಿ ಉಕ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಿತು.ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ರಮಾನಂದ ಬಿ. ನಾಯಕ, ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣದ ಅವಶ್ಯಕತೆ ಇದೆ. ಸತ್ಯಾಗ್ರಹ ಸ್ಮಾರಕ ವಿದ್ಯಾಲಯದ ಈ ಕ್ರೀಡಾಂಗಣದಲ್ಲಿ ಅನೇಕ ರಾಜ್ಯ, ವಿಭಾಗ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ಯಶಸ್ವಿಯಾಗಿ ಜರುಗಿವೆ. ಕ್ರೀಡಾ ಮನೋಭಾವದಿಂದ ಒಳ್ಳೆಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಲಿ ಎಂದರು.ಶೆಟಗೇರಿ ಗ್ರಾಪಂ ಅಧ್ಯಕ್ಷ ಲಕ್ಷ್ಮಿಧರ ನಾಯಕ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ಎಂ. ನಾಯಕ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸುಧೀರ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಜಿ. ನಾಯಕ, ಹೊಸ್ಕೇರಿ, ಕಾರ್ಯದರ್ಶಿ ರಾಜು ನಾಯಕ, ಸತ್ಯಾಗ್ರಹ ಸ್ಮಾರಕ ವಿದ್ಯಾಲಯದ ಮುಖ್ಯಾಧ್ಯಾಪಕ ಎನ್.ವಿ. ರಾಠೋಡ್, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಆರ್. ನಾಯಕ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಯ ನಾಯಕ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿಠೋಬ ನಾಯಕ, ಬಿ.ಜಿ. ನಾಯಕ, ಅರುಣ್, ಪ್ರಕಾಶ ಶಿರಾಲಿ, ಅಂಕೋಲಾ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ನಾಯಕ ಉಪಸ್ಥಿತರಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಿವಾನಂದ ಬಿ. ನಾಯಕ ವಂದಿಸಿದರು. ಶಿಕ್ಷಕ ರಾಜೇಂದ್ರ ಕೇಣಿ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ರಾಜೇಶ ನಾಯಕ ಸೂರ್ವೆ ನಿರ್ವಹಿಸಿದರು.