ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾರತ ದೇಶದ ಪ್ರಧಾನಿಯಾಗುವ ಉನ್ನತ ಸ್ಥಾನಕ್ಕೆ ಹೋಗಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲರಾದ ಸುಂಡಹಳ್ಳಿ ಮಂಜುನಾಥ್ ಆಶಿಸಿದರು.ಮಂಡ್ಯ ನಗರದ ನಗರಸಭಾ ಆವರಣದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಎಂ.ಮಲ್ಲಿಕಾರ್ಜುನ ಖರ್ಗೆ ರವರ ೮೩ನೇ ಹುಟ್ಟು ಹಬ್ಬದ ಅಂಗವಾಗಿ ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನ ವಿತರಣೆ ನೆರವೇರಿಸಿ ಅವರು ಮಾತನಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರವನ್ನು ಸ್ವಚ್ಛ ಮಾಡುವ ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನವನ್ನು ಹಮ್ಮಿಕೊಂಡಿದ್ದೇವೆ. ಭಗವಾನ್ ಬುದ್ಧ ಅವರಿಗೆ ಆರೋಗ್ಯ,ಆಯಸ್ಸು ನೀಡಲಿ ಎಂದು ಶುಭ ಹಾರೈಸಿದರುಸಾಮಾನ್ಯ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಅದರಲ್ಲೂ ದಲಿತ ಕುಟುಂಬದಲ್ಲಿ ಜನಿಸಿದ ಅವರು, ಎಐಸಿಸಿ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಸಂತೋಷದ ವಿಷಯ ಎಂದು ಹೇಳಿದರು.
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು , ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನ ವಿತರಣೆ ಮಾಡಿ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭ ನುಡಿಗಳನ್ನಾಡಿದರು.ಕಾರ್ಯಕ್ರಮದಲ್ಲಿ ಶಾಸಕರಾದ ಪಿ.ರವಿಕುಮಾರ್, ಕದಲೂರು ಉದಯ್, ಮೈಷುಗರ್ ಕಾರ್ಖಾನೆಯ ಅಧ್ಯಕ್ಷ ಸಿ.ಡಿ. ಗಂಗಾಧರ್, ನಗರಸಭಾ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಎಚ್.ಎಸ್.ಮಂಜು, ಮುಡಾ ಅಧ್ಯಕ್ಷ ನಹೀಮ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಂ.ಎನ್.ಶ್ರೀಧರ್, ಸದಸ್ಯರಾದ ಗೀತಾ , ಭಾರತೀಶ್ ,ಹರೀಶ್, ಶಿವಪ್ರಕಾಶ್ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಸಿ.ತ್ಯಾಗರಾಜು, ಚಂದ್ರಶೇಖರ್, ವಿಶ್ವನಾಥ್, ಸಿ.ಎಂ.ದ್ಯಾವಪ್ಪ ಸೇರಿದಂತೆ ಇತರರು ಹಾಜರಿದ್ದರು.