ಕಸ್ತೂರಿ ರಂಗನ್ ವರದಿ ವಿರುದ್ಧ ಬಿಜೆಪಿ ದೆಹಲಿಯಲ್ಲಿ ಪ್ರತಿಭಟಿಸಲಿ: ಐವನ್

| Published : Oct 20 2024, 02:07 AM IST

ಸಾರಾಂಶ

ಸುಳ್ಳು ದಾಖಲೆಗಳ ಮೂಲಕ ಅನರ್ಹರಿಗೆ ನೀಡಲಾಗಿರುವ ನಕಲಿ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವುದು ಸರಿಯಲ್ಲ ಎಂದು ಕೋಟ ಹೇಳಲಿ ನೋಡೋಣ ಎಂದು ಐವನ್ ಡಿಸೋಜ, ಅರ್ಹತೆ ಇದ್ದೂ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದರೆ ನಾವೇ ಮುಂದೆ ನಿಂತು ಪ್ರತಿಭಟನೆ ಮಾಡುತ್ತೇವೆ ಎಂದರು.

ಕನ್ನಡಪ್ರಭ ವಾರ್ತೆ ಉಡುಪಿ

ಬಿಜೆಪಿ ಸಂಸದರಿಗೆ ತಾಕತ್ತು ಇದ್ದರೆ ಕಸ್ತೂರಿರಂಗನ್ ವರದಿ ಜಾರಿಯ ವಿರುದ್ಧ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಲಿ, ಕಾಂಗ್ರೆಸ್ ಸಂಸದರು ಅವರಿಗೆ ಪೂರ್ಣ ಬೆಂಬಲ ನೀಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸವಾಲು ಹಾಕಿದ್ದಾರೆ.

ಶನಿವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಈಗ ಚೆಂಡು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ವರದಿಯನ್ನು ಏನು ಮಾಡಬೇಕು ಎಂದು ಕೇಂದ್ರ ಸರ್ಕಾರ ನಿರ್ಧರಿಸಲಿ ಎಂದರು.

ನಕಲಿ ಕಾರ್ಡ್ ರದ್ದು ಬೇಡ್ವಾ?: ಉಡುಪಿ ಜಿಲ್ಲೆಯಲ್ಲಿ 40 ಸಾವಿರ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸುಳ್ಳು ಹೇಳುತಿದ್ದಾರೆ. ಸುಳ್ಳು ದಾಖಲೆಗಳ ಮೂಲಕ ಅನರ್ಹರಿಗೆ ನೀಡಲಾಗಿರುವ ನಕಲಿ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವುದು ಸರಿಯಲ್ಲ ಎಂದು ಕೋಟ ಹೇಳಲಿ ನೋಡೋಣ ಎಂದು ಐವನ್ ಡಿಸೋಜ, ಅರ್ಹತೆ ಇದ್ದೂ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದರೆ ನಾವೇ ಮುಂದೆ ನಿಂತು ಪ್ರತಿಭಟನೆ ಮಾಡುತ್ತೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ರಾಜು ಪೂಜಾರಿ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ನಾಯಕರಾದ ಅಶೋಕ್ ಕುಮಾರ್. ಕಿಶನ್ ಹೆಗ್ಡೆ ಕೊಳ್ಕೆಬೈಲು, ಉದಯಕುಮಾರ್ ಶೆಟ್ಟಿ ಮುನಿಯಾಲು, ಡಾ. ಸನಿತಾ ಶೆಟ್ಟಿ ಹಾಜರಿದ್ದರು.