ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಗೆಲ್ಲಿಸೋಣ: ಮೋಹನ್‌

| Published : Mar 19 2024, 12:46 AM IST

ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಗೆಲ್ಲಿಸೋಣ: ಮೋಹನ್‌
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವ ಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ. ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವ ಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ. ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ನಾನು ಒಬ್ಬ ಪ್ರಮುಖನಾಗಿದ್ದೆ. ವರಿಷ್ಠರು ಎಲ್ಲವನ್ನು ಪರಿಗಣಿಸಿ, ಅಂತಿಮವಾಗಿ ಎಸ್. ಬಾಲರಾಜುಗೆ ಅವಕಾಶ ನೀಡಿದ್ದಾರೆ. ಅವರಿಗೆ ಮೊದಲು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ನಾನು ಸಹ ನನ್ನ ಸಮಯವನ್ನು ಕೊಡುವ ಜೊತೆಗೆ ಕ್ಷೇತ್ರದಲ್ಲಿ ಮುಖಂಡರೊಂದಿಗೆ ಪ್ರವಾಸ ಮಾಡಿ, ದೇಶದ ಅಭಿವೃದ್ಧಿಗಾಗಿ ಮೋದಿ ಬೇಕು ಎಂಬುದನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಮತ್ತೊಮ್ಮೆ ದೆಹಲಿಗೆ ಕಳುಹಿಸಬೇಕಾಗಿದೆ. ಇದಕ್ಕಾಗಿ ಸಾಮಾನ್ಯ ಕಾರ್ಯಕರ್ತನಂತೆ ದುಡಿಯುವುದಾಗಿ ತಿಳಿಸಿದ್ದಾರೆ.

ಕಳೆದ ೭ ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡುವ ಜೊತೆಗೆ ಆರೋಗ್ಯ ಶಿಬಿರಗಳು, ಸಾಮಾಜಿಕ ಸೇವಾ ಕಾರ್ಯಗಳು ಮಾಡಿಕೊಂಡು, ಕ್ಷೇತ್ರದ ಜನರಿಗೆ ಚಿರಪರಿಚತನಾಗಿದ್ದೆ. ಮುಂದೆಯು ಸಹ ನನ್ನ ಸೇವೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಬಿಜೆಪಿ ಸದಸ್ಯನಾಗಿರುತ್ತೇನೆ. ಸರ್ಕಾರಿ ಹುದ್ದೆಯನ್ನು ತ್ಯಜಿಸಿ ರಾಜಕೀಯ ಪಾರ್ದಾಪಣೆ ಮಾಡಿದ್ದೇನೆ. ಬಿಜೆಪಿ ದೇಶದ ದೊಡ್ಡ ಪಾರ್ಟಿ. ಅತಿ ದೊಡ್ಡ ಕಾರ್ಯಕರ್ತರ ಪಡೆಯನ್ನು ಹೊಂದಿದೆ. ರಾಷ್ಟ್ರೀಯ ವಿಚಾರ ಧಾರೆಗಳನ್ನು ಹೊಂದಿರುವ ಏಕೈಕ ಪಕ್ಷ. ವ್ಯಕ್ತಿಗಿಂತ ಪಕ್ಷದ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ. ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ. ಹೀಗಾಗಿ ವೈಯಕ್ತಿಕ ಮನಸ್ತಾಪಗಳನ್ನು ಬದಿಗೊತ್ತಿ ಈ ಬಾರಿಯೂ ಬಿಜೆಪಿ ಗೆಲ್ಲಬೇಕು. ಮೋದಿ ಅವರ ಕೈ ಬಪಡಿಸಲು ಎಲ್ಲರು ದುಡಿಯೋಣ. ನಾನು ರಾಜಕೀಯದಿಂದ ಹಿಂದೆ ಸರಿಯುವುದಿಲ್ಲ. ಎಂದಿನಂತೆ ಎಲ್ಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು ನನ್ನ ಕಾರ್ಯಚಟುವಟಿಕೆಗಳು ಕೂಡ ನಿರಂತರವಾಗಿರುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.