ಸಾರಾಂಶ
ಮೊಳಕಾಲ್ಮುರು: ನಾಡು, ನುಡಿ ಉಳಿವಿಗಾಗಿ ಬ್ರಿಟಿಷರ ವಿರುದ್ಧ ರಣಚಂಡಿಯಾಗಿ ಹೋರಾಟ ನಡೆಸಿದ್ದ ಕಿತ್ತೂರ ಸಂಸ್ಥಾನದ ರಾಣಿ ಚೆನ್ನಮ್ಮ ದೇಶ ಪ್ರೇಮ ಪ್ರತಿಯೊಬ್ಬರಿಗೂ ಆದರ್ಶವಾಗಬೇಕೆಂದು ತಹಸೀಲ್ದಾರ್ ಜಗದೀಶ್ ಹೇಳಿದರು.
ಮೊಳಕಾಲ್ಮುರು: ನಾಡು, ನುಡಿ ಉಳಿವಿಗಾಗಿ ಬ್ರಿಟಿಷರ ವಿರುದ್ಧ ರಣಚಂಡಿಯಾಗಿ ಹೋರಾಟ ನಡೆಸಿದ್ದ ಕಿತ್ತೂರ ಸಂಸ್ಥಾನದ ರಾಣಿ ಚೆನ್ನಮ್ಮ ದೇಶ ಪ್ರೇಮ ಪ್ರತಿಯೊಬ್ಬರಿಗೂ ಆದರ್ಶವಾಗಬೇಕೆಂದು ತಹಸೀಲ್ದಾರ್ ಜಗದೀಶ್ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕೆಯಾಗಿ ಐತಿಹಾಸಿಕ ಪುಟಗಳಲ್ಲಿ ರಾರಾಜಿಸುತ್ತಿರುವ ವೀರವನಿತೆ ಕಿತ್ತೂರ ರಾಣಿ ಚೆನ್ನಮ್ಮ ಸ್ವಾಭಿಮಾನ, ನಾಡ ಪ್ರೇಮ, ಅಖಂಡ ಭಾರತದ ಉಳಿವಿಗಾಗಿ ಕೆಚ್ಚೆದೆಯ ಹೋರಾಟ ಮಾಡಿದ್ದರು. ಕಿತ್ತೂರಿನ ಕೀರ್ತಿ ಚರಿತ್ರೆಯಲ್ಲಿ ಅಜರಾಮರವಾಗಿ ಉಳಿಯಲು ಅವರು ತೋರಿದ ಪರಾಕ್ರಮ ಹಾಗೂ ನಾಡು ನುಡಿಯ ಮೇಲಿನ ಅವರ ಪ್ರೇಮ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದರು.
ಕೆಚ್ಚೆದೆಯ ಯುದ್ಧಕಲೆ ಹಾಗೂ ಜೀವಿತ ಕಾಲದುದ್ದಕ್ಕೂ ಹಂಗಿನ ಜೀವನಕ್ಕೆ ಆಸೆ ಪಡದೆ ಸರ್ವತಂತ್ರ ಸ್ವಾತಂತ್ರ್ಯ ಪ್ರೇಮಿ ಎಂಬ ಪಟ್ಟ ಪಡೆದ ಇವರು ಸದಾ ಸ್ಮರಣೀಯರು ಎಂದು ಹೇಳಿದರು.ಈ ವೇಳೆ ಏಡಿ ಡಾ.ರಂಗಪ್ಪ, ಪರಿಶಿಷ್ಟ ಪಂಗಡ ಇಲಾಖೆ ಸಹಾಯಕ ನಿರ್ದೇಶಕ ನಾಸಿರ್, ರೇಷ್ಮೆ ಇಲಾಖೆ ಮಹೇಶ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಾಲಯ್ಯ, ಗೋಪಾಲ್, ರಂಗನಾಥ್ ಇದ್ದರು.