ಸಾರಾಂಶ
ಹೊನ್ನಾವರ: ತಾಲೂಕಿನ ನಿವೃತ್ತಿಕೊಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮುಗ್ವಾ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಗುರುವಾರ ನಡೆಯಿತು.ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಗ್ವಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಐ.ವಿ. ನಾಯ್ಕ ಮಾತನಾಡಿ, ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ಅವಶ್ಯಕತೆ ಇದೆ. ಇದು ಶಿಕ್ಷಕರು, ಪಾಲಕರಿಂದ ಸಿಗುವಂತಾಗಬೇಕು ಎಂದರು.
ಮುಗ್ವಾ ಕ್ಲಸ್ಟರ್ ಸಿಆರ್‌ಪಿ ಪ್ರಮೀಳಾ ಮಾತನಾಡಿ, ಪ್ರತಿವರ್ಷ ಪ್ರತಿಭಾ ಕಾರಂಜಿ ನಡೆದರೂ ಇಲ್ಲಿ ಬರುವ ಪ್ರತಿಭೆಗಳು ಹೊಸದಾಗಿರುತ್ತದೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆ ಹೊರಹೊಮ್ಮಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ ಎಂದರು.ನಿವೃತ್ತಿಕೊಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ಪರಮೇಶ್ವರಿ ಮುಕ್ರಿ, ನಿವೃತ್ತಿಕೊಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಾಧ್ಯಾಪಕಿ ಮುಕ್ತಾ ಹೆಗಡೆ, ವಿವಿಧ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಮಹಾಬಲೇಶ್ವರ ಭಟ್ಟ, ಭಾಗ್ಯ ಹೆಗಡೆ, ಮಾಲಿನಿ ನಾಯ್ಕ, ಶಿಕ್ಷಕಿಯರಾದ ಶಾರದಾ ಹೆಗಡೆ, ಗೌರಿ ಭಟ್ಟ ಉಪಸ್ಥಿತರಿದ್ದರು. ನಂತರ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆದವು.