ಸಾರಾಂಶ
ಸುರಪುರ ನಗರದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ ದವಸ ಧಾನ್ಯಗಳನ್ನು ಪರಿಶೀಲಿಸಿತು.
ಕನ್ನಡಪ್ರಭ ವಾರ್ತೆ ಸುರಪುರ
ಅಪೌಷ್ಟಿಕತೆಯ ಆಧಾರದ ಮೇಲೆ ಸುರಪುರ ಭಾಗದಲ್ಲಿ 108 ಮಕ್ಕಳನ್ನು ಗುರುತಿಸಿದ್ದರೂ, ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳು ದಾಖಲಾಗದಿರುವುದು ಬೇಸರದ ಸಂಗತಿ. ಮಕ್ಕಳನ್ನು ದಾಖಲಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸುಂಬೆ ಹೇಳಿದರು.ನಗರದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ಗುರುವಾರ ಸಂಜೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ ಭೇಟಿ ಅಪೌಷ್ಟಿಕತೆಯ ಮಕ್ಕಳ ಮಾಹಿತಿ ವಿವರ ಪಡೆದು ಮಾತನಾಡಿದ ಅವರು, ಮಕ್ಕಳ ಪೌಷ್ಟಿಕ ಪುನಶ್ಚೇತನ ಯೋಜನೆಯಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸಲು ಸರಕಾರ ಯೋಜನೆ ರೂಪಿಸಿದೆ. ಆದರೆ, ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆಯಬೇಕು. ವೈದ್ಯರು ಇದರತ್ತ ಗಮನ ನೀಡಬೇಕು ಎಂದರು.
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಸಂಖ್ಯೆ ಕಡಿಮೆಯಿದ್ದು, ಸ್ತ್ರೀ ತಜ್ಞರು, ಮಕ್ಕಳ ವೈದ್ಯರು ಇಲ್ಲದಿರುವುದು ಪರಿಶೀಲನೆಯಿಂದ ತಿಳಿದು ಬಂದಿದೆ. ಜಿಪಂ ಸಿಇಒ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡದಲ್ಲಿ ಗೋವಿಂದ ರಾಠೋಡ್, ಪ್ರಭಾರಿ ಡಿಡಿಪಿಐ ಬಸನಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವೀರಣ್ಣಗೌಡ ಇದ್ದರು.