ಸಾರಾಂಶ
ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳೂ ಸ್ಪರ್ಧಾತ್ಮಕತೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಚಿಕ್ಕವರಾಗಿನಿಂದಲೇ ಉನ್ನತ ಮಟ್ಟದ ಧ್ಯೇಯ ಮತ್ತು ಗುರಿಗಳನ್ನಿಟ್ಟುಕೊಂಡಾಗ ಮಾತ್ರ ಮಹತ್ತರವಾದುದನ್ನು ಸಾಧಿಸಲು ಸಾಧ್ಯ. ಮಕ್ಕಳು ಮೊಬೈಲ್ ಗೀಳಿಗೆ ಅಂಟಿಕೊಳ್ಳಬಾರದು.
ಕನ್ನಡಪ್ರಭ ವಾರ್ತೆ ಕೆಜಿಎಫ್ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಕ್ಕಳು ತಮ್ಮ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕನ್ನಡ ಸಂಘದ ಅಧ್ಯಕ್ಷ ಪ್ರಸನ್ನ ರೆಡ್ಡಿ ಹೇಳಿದರು.ನಗರದ ಕನ್ನಡ ಸಂಘದ ಆವರಣದಲ್ಲಿ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಎಲ್ಲರೊಂದಿಗೆ ಹೊಂದಿಕೊಳ್ಳಬೇಕು
ಮಕ್ಕಳು ಚಿಕ್ಕಂದಿನಿಂದಲೇ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಕುಟುಂಬದವರೊಂದಿಗೆ ಬೆರೆತು ಎಲ್ಲರೊಂದಿಗೂ ಹೊಂದಿಕೊಂಡು ಹೋಗುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ಅಗಾಧ ಪ್ರತಿಭೆ ಅಡಗಿದ್ದು, ಅದರ ಸದುಪಯೋಗವಾದಾಗ ಮಾತ್ರ ಸಾರ್ಥಕತೆ ದೊರೆಯಲು ಸಾಧ್ಯ. ಮಕ್ಕಳಲ್ಲಿ ಏನನ್ನಾದರೂ ಸಾಧಿಸುತ್ತೇನೆ ಎಂಬ ಛಲವಿದ್ದಾಗ ಮಾತ್ರ ಯಶಸ್ವಿ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.ಮೊಬೈಲ್ ಗೀಳು ಬಿಡಿ
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಕುಮಾರ್ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳೂ ಸ್ಪರ್ಧಾತ್ಮಕತೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಚಿಕ್ಕವರಾಗಿನಿಂದಲೇ ಉನ್ನತ ಮಟ್ಟದ ಧ್ಯೇಯ ಮತ್ತು ಗುರಿಗಳನ್ನಿಟ್ಟುಕೊಂಡಾಗ ಮಾತ್ರ ಮಹತ್ತರವಾದುದನ್ನು ಸಾಧಿಸಲು ಸಾಧ್ಯ. ಮಕ್ಕಳು ಮೊಬೈಲ್ ಗೀಳಿಗೆ ಅಂಟಿಕೊಳ್ಳದೇ ಅಂದಿನ ಪಾಠ ಪ್ರವಚನ ಅಂದೇ ಸತತವಾಗಿ ಅಭ್ಯಾಸ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.ಕಸಾಪ ತಾಲೂಕು ಅಧ್ಯಕ್ಷ ಶ್ರೀಹರಿ, ಬಿಇಓ ಮುನಿವೆಂಕಟರಾಮಾಚಾರಿ, ಕನ್ನಡ ಸಂಘದ ಉಪಾಧ್ಯಕ್ಷ ತ್ಯಾಗರಾಜು, ಕಾರ್ಯದರ್ಶಿ ಅಶ್ವತ್ಥ್, ಮಾಜಿ ಅಧ್ಯಕ್ಷ ವೀರ ವೆಂಕಟಪ್ಪ, ಕೋಗಿಲಹಳ್ಳಿ ಕೃಷ್ಣಪ್ಪ, ಅಶೋಕ್ ಲೋನಿ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ರವಿ ರೆಡ್ಡಿ, ಬಿಆರ್‌ಸಿ ಶಂಕರ್ ಇದ್ದರು.