ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ: ಬಸವರಾಜ ಬಂಡಿವಾಡ

| Published : Oct 19 2025, 01:02 AM IST

ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ: ಬಸವರಾಜ ಬಂಡಿವಾಡ
Share this Article
  • FB
  • TW
  • Linkdin
  • Email

ಸಾರಾಂಶ

ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಸಭಾಭವನದಲ್ಲಿ ಶನಿವಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಮಾಹಿತಿ, ಶಿಕ್ಷಣ, ಸಂವಹನ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ ಜರುಗಿತು.

ಲಕ್ಷ್ಮೇಶ್ವರ: ಪಟ್ಟಣದ ಪುರಸಭೆ ಸಭಾಭವನದಲ್ಲಿ ಶನಿವಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಮಾಹಿತಿ, ಶಿಕ್ಷಣ, ಸಂವಹನ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ ಜರುಗಿತು.

ಪೌರ ಕಾರ್ಮಿಕರಿಂದ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಬೆಂಗಳೂರಿನ ಬಿಬಿಎಂಪಿಯಿಂದ ಉತ್ತಮ ತರಬೇತುದಾರ ಪ್ರಶಸ್ತಿ ಪಡೆದ ಬಸವರಾಜ ಬಂಡಿವಾಡ ಮಾತನಾಡಿ, ಪಟ್ಟಣದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಬಹಳ ಮಹತ್ವದ್ದು. ಅವರು ಕೆಲಸ ಮಾಡದಿದ್ದರೆ ಇಡೀ ಊರು ಗಬ್ಬೆದ್ದು ನಾರುತ್ತದೆ. ಆದರೆ ಅವರು ಕೇವಲ ಸ್ವಚ್ಛತೆಗೆ ಆದ್ಯತೆ ನೀಡದೆ ತಮ್ಮ ಆರೋಗ್ಯದ ಬಗ್ಗೆ ಗಮನ ವಹಿಸಬೇಕು. ಪೌರ ಕಾರ್ಮಿಕರಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಕಾಲಕಾಲಕ್ಕೆ ಅವರಿಗೆ ತರಬೇತಿ ಅಗತ್ಯ ಇರುತ್ತದೆ. ಈ ನಿಟ್ಟಿನಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಇಡೀ ರಾಜ್ಯದ ಪೌರ ಕಾರ್ಮಿಕರಿಗೆ ಸಾಮರ್ಥ್ಯಾಭಿವೃದ್ಧಿ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಪೌರ ಕಾರ್ಮಿಕರು ಹೆಚ್ಚಿನ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕಾದ ಅಗತ್ಯ ಇದೆ. ಬೆಳಗಿನ ಜಾವದಿಂದಲೇ ಕರ್ತವ್ಯಕ್ಕೆ ಹಾಜರಾಗುವ ಕಾರ್ಮಿಕರಿಗಾಗಿ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ಲ ಅವರು ಪೌರ ಕಾರ್ಮಿಕರಿಗಾಗಿ ಇರುವ ಸೌಲಭ್ಯಗಳ ಕುರಿತು ಮಾತನಾಡಿದರು. ಆರೋಗ್ಯ ಇಲಾಖೆಯ ಪ್ರಕಾಶ ಕರ್ಜಗಿ ಪೌರ ಕಾರ್ಮಿಕರಿಗೆ ಬರುವ ರೋಗಗಳು ಹಾಗೂ ಅವುಗಳ ನಿಯಂತ್ರಣದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಹನುಮಂತಪ್ಪ ನಂದೆಣ್ಣವರ, ಪೌರ ಕಾರ್ಮಿಕರು, ಲೋಡರ್ಸ್ ವಾಹನ ಚಾಲಕರು ಇದ್ದರು.