ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಕಾನೂನು ಚೌಕಟ್ಟಿನಲ್ಲಿ ನಡೆದುಕೊಳ್ಳಲಿ - ಸಚಿವ ವಿ. ಸೋಮಣ್ಣ

| Published : Aug 19 2024, 12:50 AM IST / Updated: Aug 19 2024, 01:23 PM IST

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಕಾನೂನು ಚೌಕಟ್ಟಿನಲ್ಲಿ ನಡೆದುಕೊಳ್ಳಲಿ - ಸಚಿವ ವಿ. ಸೋಮಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಕಾನೂನು ಅಡಿಯಲ್ಲಿ ತಮ್ಮ ಕೆಲಸ ಮಾಡಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಚೌಕಟ್ಟಿನಲ್ಲಿ ನಡೆದುಕೊಳ್ಳಬೇಕು

  ತುಮಕೂರು :  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಕಾನೂನು ಅಡಿಯಲ್ಲಿ ತಮ್ಮ ಕೆಲಸ ಮಾಡಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಚೌಕಟ್ಟಿನಲ್ಲಿ ನಡೆದುಕೊಳ್ಳಬೇಕು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ನಗರದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಚೌಕಟ್ಟಿನಲ್ಲಿ ನಡೆದುಕೊಂಡರೆ ಅವರ ವರ್ಚಸ್ಸು ಹೆಚ್ಚಾಗುತ್ತದೆ. ರಾಜ್ಯಪಾಲರಿಗೆ ಈ ಪ್ರಕರಣದಲ್ಲಿ ತಪ್ಪು ಎನಿಸಿದ್ದರಿಂದ ಅವರು ಪ್ರಾಸಿಕ್ಯೂಷನ್ ನಿರ್ಧಾರ ಮಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂಬ ಉದ್ದೇಶದಿಂದಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ನುರಿತ ರಾಜಕಾರಣಿಯಾಗಿದ್ದು, ಇಂತಹ ಸಂದರ್ಭದಲ್ಲಿ ಅವರ ಪಕ್ಷ ದೃಢ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರಾಜೀನಾಮೆ ಬಗ್ಗೆ ನಾವು ತೀರ್ಮಾನ ಮಾಡಲು ಆಗುವುದಿಲ್ಲ. ಅವರ ಪಕ್ಷ ತೀರ್ಮಾನ ಮಾಡಬೇಕು. ಸಿದ್ದರಾಮಯ್ಯ ದುಡುಕೋದು, ಮತ್ತೊಂದು ಮಾಡುತ್ತಾರೆ ಎಂಬುದು ಗೊತ್ತಿಲ್ಲ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ 125 ವರ್ಷ ಇತಿಹಾಸ ಇರುವ ಪಕ್ಷ ಬಿಜೆಪಿಯವರು ಹೇಗೆ ನಡೆದುಕೊಂಡಿದ್ದೀವಿ ಎಂಬುದನ್ನು ಅರ್ಥ ಮಾಡಿಕೊಂಡು ತೀರ್ಮಾನ ಕೈಗೊಂಡರೆ ಮುಂದಿನ ಪೀಳಿಗೆಗೆ ರಾಜಕೀಯದ ಬಗ್ಗೆ ಗೌರವ ಬರುತ್ತದೆ ಎಂದರು.