ಸಾರಾಂಶ
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಅವರನ್ನು ಅಭಿನಂದಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಮಹಿಳೆಯರು ಇಂದು ಎಲ್ಲಾ ರಂಗದಲ್ಲೂ ಸಾಧನೆ ಮಾಡಿದ್ದಾರೆ, ಇದಕ್ಕೆ ಮೂಲ ಕಾರಣ ಅವರಿಗೆ ಸಿಕ್ಕಿದ ಬೆಂಬಲ, ಆದರೆ ಇಂದು ಹೆಣ್ಣು ಭ್ರೂಣ ಹತ್ಯೆ ಹೆಚ್ಚುತ್ತಿರುವುದು ಕಳವಳಕಾರಿ ವಿಷಯ. ಅಂತಾರಾಷ್ಟ್ರೀಯ ಮಹಿಳಾ ದಿನ ಮಾತ್ರವಲ್ಲದೆ ಪ್ರತಿದಿನವೂ ಕೂಡ ಮಹಿಳಾ ದಿನ ಆಗಬೇಕು ಎಂದು ಕಸಾಪ ಉಡುಪಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಹೇಳಿದ್ದಾರೆ.ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ವಿದುಷಿ ಪ್ರತಿಭಾ ಎಲ್. ಸಾಮಗ ಮಾತನಾಡಿ, ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುವಂತೆ, ಯಶಸ್ವಿ ಮಹಿಳೆಯ ಹಿಂದೆ ಒಬ್ಬ ಪುರುಷ ಇದ್ದರೆ, ಮಹಿಳೆಯರು ಎಲ್ಲಾ ರಂಗದಲ್ಲಿ ಸಾಧನೆ ತೋರಲು ಸಾಧ್ಯ ಎಂದರುಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಕೋಟ ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ಕಸಾಪ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ರಂಜನಿ ವಸಂತ್, ದೀಪಾ ಚಂದ್ರಕಾಂತ, ಉಮೇಶ್ ಆಚಾರ್ಯ, ಗಣೇಶ್ ಬ್ರಹ್ಮಾವರ, ಸುಧಾಕರ್ ಶೆಟ್ಟಿ, ವಸಂತ್, ಡಾ. ಸುಚರಿತ ರಾಜೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಕಸಾಪ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ. ಸ್ವಾಗತಿಸಿ ಪ್ರಸ್ತಾಪಿಸಿದರು. ಕಾರ್ಯದರ್ಶಿ ಜನಾರ್ದನ್ ಕೊಡವೂರು ಧನ್ಯವಾದವಿತ್ತರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕರ್ವಾಲ್ ನಿರೂಪಿಸಿದರು.