ಸಾರಾಂಶ
ಸಿದ್ದಾಪುರ: ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ಮುಖ್ಯವಾದದ್ದು. ಪ್ರತಿಯೊಬ್ಬ ಕಾರ್ಯಕರ್ತನೂ ಅಭಿಯಾನದಲ್ಲಿ ಪಾಲ್ಗೊಂಡು ಸದಸ್ಯತ್ವದ ವೇಗ ಹೆಚ್ಚಿಸಬೇಕಾಗಿದೆ. ಪ್ರತಿ ಬೂತ್‌ನಲ್ಲಿ ಮೂರನೂರಕ್ಕೂ ಹೆಚ್ಚು ಸದಸ್ವತ್ವ ಆಗುವಲ್ಲಿ ಶ್ರಮಿಸಬೇಕು. ಪ್ರತಿಶಕ್ತಿ ಕೇಂದ್ರ, ತಾಲೂಕು ಬಿಜೆಪಿ ಮಂಡಲ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯ ಸಭಾಂಗಣದಲ್ಲಿ ನಡೆದ ಗ್ರಾಮೀಣ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಜನಪರವಾಗಿದ್ದು, ಈ ಎಲ್ಲ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಆ ಕುರಿತು ಪ್ರಾಮಾಣಿಕವಾದ ಪ್ರಯತ್ನ ಮಾಡುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಜಿಲ್ಲೆಯಲ್ಲಿ ೨೫೦ ನೂತನ ಬಿಎಸ್‌ಎನ್‌ಎಲ್ ಟವರ್ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯ ಯಾವ ಭಾಗದಲ್ಲಿ ಇಲ್ಲಿಯವೆಗೆ ನೆಟ್‌ವರ್ಕ್ ಲಭ್ಯ ಇಲ್ಲವೋ ಅಂತಹ ಸ್ಥಳಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಈಗಾಗಲೇ ಕೆಲವು ಕಡೆ ಉದ್ಘಾಟನೆ ಮಾಡಲಾಗಿದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಬಿಎಸ್‌ಎನ್‌ಎಲ್ ಕೇಂದ್ರದಲ್ಲಿನ ಬ್ಯಾಟರಿ ಹಾಳಾದಲ್ಲಿ ಅಲ್ಲಿ ಹೊಸ ಬ್ಯಾಟರಿಯನ್ನು ಕೆಲವೇ ದಿನದಲ್ಲಿ ನೀಡಲಾಗುತ್ತದೆ. ಇದರಿಂದ ಮೊಬೈಲ್ ಸಂಪರ್ಕಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್, ತಾಲೂಕು ಬಿಜೆಪಿ ಅಧ್ಯಕ್ಷ ತಿಮ್ಮಪ್ಪ ಎಂ.ಕೆ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.ಹಾರ್ಸಿಕಟ್ಟಾ ಗ್ರಾಪಂ ಅಧ್ಯಕ್ಷೆ ಹನುಮಕ್ಕ ಭೋವಿ, ಪ್ರಮುಖರಾದ ಮಾರುತಿ ನಾಯ್ಕ ಹೊಸೂರು, ಎಸ್.ಕೆ. ಮೇಸ್ತಾ, ನಾರಾಯಣ ಹೆಗಡೆ ಚಾರೆಕೋಣೆ ಇತರರಿದ್ದರು. ಗಣೇಶ ಹೆಗಡೆ ಕರ್ಕಿಸವಲ್ ಕಾರ್ಯಕ್ರಮ ನಿರ್ವಹಿಸಿದರು.