ಪ್ರತಿಯೊಬ್ಬರೂ ದೇಶಾಭಿಮಾನ ಬೆಳೆಸಿಕೊಳ್ಳಿ

| Published : Aug 16 2025, 12:00 AM IST

ಸಾರಾಂಶ

ಸ್ವಾತಂತ್ರ್ಯದ ದಿನಗಳಲ್ಲಿ ಎಷ್ಟೋ ಜನರ ರಕ್ತದ ಮಡುವಿನಲ್ಲಿ ಹೋರಾಟ ಹಾಗೂ ಶಾಂತಿಯ ಫಲವಾಗಿ ಬ್ರಿಟೀಷರಿಂದ ಆಗಸ್ಟ್ ೧೫ರಂದು ಸ್ವಾತಂತ್ರ್ಯ ಪಡೆದುಕೊಂಡೆವು. ದೇಶಕ್ಕಾಗಿ ದುಡಿದ ನೆಹರು, ಸುಭಾಷ್‌ ಚಂದ್ರಬೋಸ್, ಪಟೇಲ್, ಶಾಸ್ತ್ರೀ ಹೀಗೆ ಅನೇಕ ಮಹನೀಯರ ಹೋರಾಟದ ಫಲವಾಗಿ ಸಿಕ್ಕಿದ್ದು ಸ್ವಾತಂತ್ರ್ಯ. ಪ್ರತಿಯೊಬ್ಬ ಭಾರತೀಯನು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶ ಅಭಿವೃದ್ಧಿಯಾದರೆ ನಾವುಗಳು ಬೆಳೆದಂತೆ. ನಮ್ಮ ದೇಶ ಮುಂದುವರೆಯುತ್ತಿರುವ ದೇಶ, ಸ್ವಾತಂತ್ರ್ಯ ಹೋರಾಟಗಾರರ ತತ್ವ, ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು. ತ್ಯಾಗ, ಶಾಂತಿ, ಅಹಿಂಸೆಯ ಮಾರ್ಗದಲ್ಲಿ ಸ್ವಾತಂತ್ರ್ಯವನ್ನು ಪಡೆಯಲಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತ್ಯಾಗ, ಶಾಂತಿ, ಅಹಿಂಸೆಯ ಮಾರ್ಗದಲ್ಲಿ ಸ್ವಾತಂತ್ರ್ಯವನ್ನು ಪಡೆಯಲಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ಅವರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾತಂತ್ರ್ಯದ ದಿನಗಳಲ್ಲಿ ಎಷ್ಟೋ ಜನರ ರಕ್ತದ ಮಡುವಿನಲ್ಲಿ ಹೋರಾಟ ಹಾಗೂ ಶಾಂತಿಯ ಫಲವಾಗಿ ಬ್ರಿಟೀಷರಿಂದ ಆಗಸ್ಟ್ ೧೫ರಂದು ಸ್ವಾತಂತ್ರ್ಯ ಪಡೆದುಕೊಂಡೆವು. ದೇಶಕ್ಕಾಗಿ ದುಡಿದ ನೆಹರು, ಸುಭಾಷ್‌ ಚಂದ್ರಬೋಸ್, ಪಟೇಲ್, ಶಾಸ್ತ್ರೀ ಹೀಗೆ ಅನೇಕ ಮಹನೀಯರ ಹೋರಾಟದ ಫಲವಾಗಿ ಸಿಕ್ಕಿದ್ದು ಸ್ವಾತಂತ್ರ್ಯ. ಪ್ರತಿಯೊಬ್ಬ ಭಾರತೀಯನು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶ ಅಭಿವೃದ್ಧಿಯಾದರೆ ನಾವುಗಳು ಬೆಳೆದಂತೆ. ನಮ್ಮ ದೇಶ ಮುಂದುವರೆಯುತ್ತಿರುವ ದೇಶ, ಸ್ವಾತಂತ್ರ್ಯ ಹೋರಾಟಗಾರರ ತತ್ವ, ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ತಹಸೀಲ್ದಾರ್ ಶಂಕರಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಕುಮಾರ್, ತಾಲೂಕು ಪಂಚಾಯಿತಿ ಇಒ ಹರೀಶ್, ಪುರಸಭಾ ಮುಖ್ಯಾಧಿಕಾರಿ ಯತೀಶ್, ಅಧ್ಯಕ್ಷ ಮೋಹನ್, ಉಪಾಧ್ಯಕ್ಷೆ ಕವಿತರಾಜು, ಸ್ಥಾಯಿಸಮಿತಿ ಅಧ್ಯಕ್ಷ ಗಣೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಅನಿಲ್‌ ಕುಮಾರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಮತ್ತಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಇದೇ ಸಂದರ್ಭದಲ್ಲಿ ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮೆಚ್ಚುಗೆಗೆ ಪಾತ್ರವಾಯಿತು. ಕಲಾಪರಿವಾರದ ಸುಮಾರು ೧೫೦ಕ್ಕೂ ಹೆಚ್ಚು ಮಹಿಳೆಯರು ದೇಶಭಕ್ತಿಗೀತೆ ಹಾಡಿದರು. ನಕ್ಷತ್ರಬಾಲು ಭಾರತಾಂಬೆಯ ವೇಷ ಧರಿಸಿದ್ದರು.