ಫ್ರಂಟ್ ಆಫೀಸ್‌ನಲ್ಲಿ ಸಾರ್ವಜನಿಕರಿಗೆ ಕಾನೂನು ಸಲಹೆ, ಉಚಿತ ಕಾನೂನು ನೆರವು, ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಕಾನೂನು ಸೇವೆಗಳ ಕುರಿತು ಮಾರ್ಗದರ್ಶನ ದೊರೆಯಲಿದೆ.
ಯಲ್ಲಾಪುರ: ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಕಾನೂನು ನೆರವು ದೊರೆಯಬೇಕು. ಆರ್ಥಿಕವಾಗಿ ಹಿಂದುಳಿದವರು ಹಾಗೂ ಕಾನೂನು ನೆರವಿನ ಅಗತ್ಯವಿರುವವರು ಯಾವುದೇ ಸಂಕೋಚವಿಲ್ಲದೆ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ಉಚಿತ ಕಾನೂನು ಸೇವೆ ಪಡೆಯಬಹುದು ಎಂದು ಕಾರವಾರ ಶಿರಸಿ ಪೀಠದ ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹುಲ್ಲೂರ ಹೇಮಲತಾ ಬಸಪ್ಪ ಹೇಳಿದರು.
ಶುಕ್ರವಾರ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗಳ ಆಶ್ರಯದಲ್ಲಿ ಫ್ರಂಟ್ ಆಫೀಸ್ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ಫ್ರಂಟ್ ಆಫೀಸ್‌ನಲ್ಲಿ ಸಾರ್ವಜನಿಕರಿಗೆ ಕಾನೂನು ಸಲಹೆ, ಉಚಿತ ಕಾನೂನು ನೆರವು, ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಕಾನೂನು ಸೇವೆಗಳ ಕುರಿತು ಮಾರ್ಗದರ್ಶನ ದೊರೆಯಲಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ಕಾನೂನು ಸೇವೆಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗಲಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ ಎಸ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿವಿಲ್ ನ್ಯಾಯಾಧೀಶೆ ಅನಿತಕುಮಾರಿ ಎಸ್., ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಭಟ್ಟ, ಅಪರ ಸರ್ಕಾರಿ ನ್ಯಾಯವಾದಿ ಎನ್.ಟಿ. ಗಾಂವ್ಕರ, ಸಹಾಯಕ ಸರ್ಕಾರಿ ಅಭಿಯೋಜಕರಾದ ಚೇತನ್ ಟಿ. ನಾಯ್ಕ, ಝೀನತಭಾನು ಶೇಖ್, ವಕೀಲರ ಸಂಘದ ಕಾರ್ಯದರ್ಶಿ ನಾಗರಾಜ ಎಂ.ಬಿ. ಹಾಗೂ ಹಿರಿಯ ನ್ಯಾಯವಾದಿಗಳು, ಪ್ಯಾನಲ್ ವಕೀಲರು, ನ್ಯಾಯಾಲಯದ ಸಿಬ್ಬಂದಿ, ಪೊಲೀಸರು ಉಪಸ್ಥಿತರಿದ್ದರು.ಇಂದು ಪ್ರಜಾ ಸೇವೆ ಅಭಿಯಾನ ಕಾರ್ಯಕ್ರಮಯಲ್ಲಾಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ಸೆ. ೧೯ರಂದು ತಾಲೂಕಿನ ಕಣ್ಣಿಗೇರಿಯಲ್ಲಿ ಆಯೋಜಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರು ಅಧಿಕಾರಿಗಳೊಂದಿಗೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.