ಹಬ್ಬ, ಆಚರಣೆ ಬದುಕಿನ ಕಲಿಕೆಯ ಹಾದಿಯಾಗಲಿ: ಡಾ. ವೀಣಾ ಸಂತೋಷ್

| Published : Aug 09 2025, 12:04 AM IST / Updated: Aug 09 2025, 12:05 AM IST

ಸಾರಾಂಶ

ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಆಶ್ರಯದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ೧೮ನೇ ವರ್ಷದ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ನೆರವೇರಿತು.

ಪುತ್ತೂರು: ಜನ ಜೀವನದಲ್ಲಿ ಹಾಸುಹೊಕ್ಕಾಗಿರುವ ಹಬ್ಬ ಮತ್ತು ವ್ರತಗಳು ಕೇವಲ ಆಚರಣೆಯಾಗದೆ ಬದುಕಿಗೆ ಕಲಿಕೆಯ ಹಾದಿಯಾಗಬೇಕು. ಸಾಂಪ್ರದಾಯಿಕವಾಗಿ ಬಂದ ಪ್ರತಿಯೊಂದು ಹಬ್ಬಗಳನ್ನು ಆಚರಣೆ ಮಾಡುವ ಮೂಲಕ ಮುಂದಿನ ಪೀಳಿಗೆ ಅದನ್ನು ಅನುಸರಿಸುವಂತೆ ಮಾಡುವುದು ಅತೀ ಅಗತ್ಯ ಎಂದು ಮಂಗಳೂರಿನ ಶ್ರೀನಿವಾಸ್ ಕಾಲೇಜಿನ ಉಪನ್ಯಾಸಕಿ ಡಾ.ವೀಣಾ ಸಂತೋಷ್ ಹೇಳಿದ್ದಾರೆ.ಸಮರ್ಪಣಾ ಮಹಿಳಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಆಶ್ರಯದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ನಡೆದ ೧೮ನೇ ವರ್ಷದ ವರಮಹಾಲಕ್ಷ್ಮೀ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಕಳೆದ ೧೮ ವರ್ಷಗಳಿಂದ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಯಿಂದ ಅತ್ಯಂತ ಶ್ರದ್ಧಾಪೂರ್ವಕವಾಗಿ ವರ ಮಹಾಲಕ್ಷ್ಮೀ ಪೂಜೆ ನಡೆಸಿಕೊಂಡು ಬರಲಾಗುತ್ತಿದೆ. ಮೊದಲ ೨ ವರ್ಷ ಇದನ್ನು ಅರುಣ್‌ಕುಮಾರ್ ಪುತ್ತಿಲ ನಡೆಸುತ್ತಿದ್ದರು. ಬಳಿಕ ಅವರು ಬಂದು ನನ್ನಲ್ಲಿ ನೀವು ಇದರ ನೇತೃತ್ವ ವಹಿಸಿಕೊಂಡು ಮಾಡಬೇಕು ಎಂದು ಹೇಳಿದರು. ಇದು ದೇವರ ಕೃಪೆ ಎಂದು ಕೊಂಡು ನಡೆಸುತ್ತಲೇ ಬಂದಿದ್ದೇವೆ ಎಂದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರು ಲಕ್ಷ್ಮೀ ಅಂದರೆ ಸಂಪತ್ತು. ಆದರೆ ದುಡ್ಡು ಮಾತ್ರವಲ್ಲ. ಆರೋಗ್ಯ, ನೆಮ್ಮದಿ, ಸಂತಾನವೂ ಸಂಪತ್ತು ಎಂದರು.ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಡಾ.ರಮ್ಯಾ ರಾಜರಾಮ್, ರಕ್ಷಾ ಉಜ್ವಲ್, ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೃಷ್ಣವೇಣಿ, ಮಹಾಬಲ ರೈ ವಳತ್ತಡ್ಕ, ಸುಭಾಷ್ ರೈ ಬೆಳ್ಳಿಪ್ಪಾಡಿ, ವಿನಯ ಸುವರ್ಣ, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ನಯನಾ ರೈ, ಸಮರ್ಪಣ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವರ್ಣಲತಾ ಹೆಗ್ಡೆ ಸ್ವಾಗತಿಸಿದರು. ಶಾರದಾ ಅರಸ್ ಕಾರ್ಯಕ್ರಮ ನಿರೂಪಿಸಿದರು.