ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ

| Published : Oct 10 2024, 02:44 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕನ್ನಡವು ಕನ್ನಡಿಗರ ಆಸ್ಮಿತೆಯಾಗಿದೆ. ಹುಟ್ಟಿನಿಂದಲೂ ನಾವು ಕನ್ನಡಿಗರಾಗಿದ್ದು, ನಮ್ಮ ಉಸಿರು ಇರುವವರೆಗೂ ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸುವ ಮೂಲಕ ಸ್ವಾಭಿಮಾನಿಗಳಾಗಿ ಕನ್ನಡಾಭಿಮಾನ ಬೆಳೆಸಿಕೊಳ್ಳಿ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕನ್ನಡವು ಕನ್ನಡಿಗರ ಆಸ್ಮಿತೆಯಾಗಿದೆ. ಹುಟ್ಟಿನಿಂದಲೂ ನಾವು ಕನ್ನಡಿಗರಾಗಿದ್ದು, ನಮ್ಮ ಉಸಿರು ಇರುವವರೆಗೂ ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸುವ ಮೂಲಕ ಸ್ವಾಭಿಮಾನಿಗಳಾಗಿ ಕನ್ನಡಾಭಿಮಾನ ಬೆಳೆಸಿಕೊಳ್ಳಿ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಜ್ಯೋತಿ ರಥ ಆಗಮಿಸಿದ ವೇಳೆ ತಾಲೂಕ ಆಡಳಿತ ಹಾಗೂ ಕಸಾಪದಿಂದ ಸ್ವಾಗತಿಸಿ ಮಾತನಾಡಿದರು. ಪ್ರತಿಯೊಬ್ಬ ಕನ್ನಡಿಗನೂ ಅನ್ಯ ಭಾಷೆಯ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯಲ್ಲಿ ವ್ಯವಹಾರ ಮಾಡುವ ಮೂಲಕ ಮಾತೃ ಭಾಷೆಯನ್ನು ಬೆಳೆಸಲು ಮುಂದಾಗ ಬೇಕಾಗಿದೆ. ಇಂದು ದೇವರಹಿಪ್ಪರಗಿ ಪಟ್ಟಣಕ್ಕೆ ಆಗಮಿಸಿದ್ದು ಸಂತಸವನ್ನುಂಟು ಮಾಡಿದೆ ಎಂದರು.ರಥವನ್ನು ಅದ್ದೂರಿಯಾಗಿ ಸ್ವಾಗತಿಸಿದ ತಹಸೀಲ್ದಾರ್ ಪ್ರಕಾಶ ಸಿಂದಗಿ ಮಾತನಾಡಿ, ಈ ರಥ ಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದರು.ತಾಲೂಕು ಕಸಾಪ ಅಧ್ಯಕ್ಷ ಜಿ.ಪಿ. ಬಿರಾದಾರ, ಅನುಗ್ರಹ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಪ್ರಭುಗೌಡ ಲಿಂಗದಳ್ಳಿ(ಚಬನೂರ), ಪಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ತಾಪಂ ಇಒ ಭಾರತಿ ಚೆಲುವಯ್ಯ, ಬಿಇಒ ಎಂ.ಬಿ.ಯಡ್ರಾಮಿ, ಕೃಷಿ ಇಲಾಖೆ ಅಧಿಕಾರಿ ಸೋಮನಗೌಡ ಬಿರಾದಾರ, ಆಹಾರ ಇಲಾಖೆ ಅಧಿಕಾರಿ ಬಸವರಾಜ ಭೋವಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಸಿ.ಕೆ.ಕುದರಿ, ಶಸಾಪ ತಾಲೂಕು ಅಧ್ಯಕ್ಷ ಎಸ್.ಎನ್. ಬಸವರೆಡ್ಡಿ, ಬಸಪ ತಾಲೂಕು ಅಧ್ಯಕ್ಷ ಸಂಗಪ್ಪ ತಡವಲ್, ಪ್ರಾಶಾಶಿ ಸಂಘದ ಅಧ್ಯಕ್ಷ ಎ.ಎಚ್.ವಾಲಿಕಾರ, ಜಯ ಕರ್ನಾಟಕ ಸಂಘಟನೆಯ ರಹಿಮಾನ್ ಕನಕಲ್, ಸಿದ್ರಾಮಪ್ಪ ಅವಟಿ, ಮುಖಂಡರಾದ ಸಂಗನಗೌಡ ಬಿರಾದಾರ, ಸಿದ್ದು ಮೇಲಿನಮನಿ, ರಾಘು ಗುಡಿಮನಿ, ಎಸ್.ಎಸ್.ಸಾತಿಹಾಳ, ಮುರ್ತೂಜಾ ತಾಂಬೋಳಿ, ಶಿವರಾಜ ತಳವಾರ ಸೇರಿದಂತೆ ಹಲವರು ಇದ್ದರು.