ಶ್ರೇಷ್ಠ ಸಂವಿಧಾನಕ್ಕೆ ಅಗೌರವ ತಂದ ಶ್ರೀಗಳ ವಿರುದ್ಧ ಕಾನೂನು ಕ್ರಮವಾಗಲಿ

| Published : Dec 01 2024, 01:35 AM IST

ಶ್ರೇಷ್ಠ ಸಂವಿಧಾನಕ್ಕೆ ಅಗೌರವ ತಂದ ಶ್ರೀಗಳ ವಿರುದ್ಧ ಕಾನೂನು ಕ್ರಮವಾಗಲಿ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

- ದಸಂಸ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಆಗ್ರಹ - - - ಹರಿಹರ: ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಘಟಕ ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಶ್ರೀಗಳು ಇಂಥ ನೀಡಿದ್ದಾರೆ. ದೇಶದ ಸಮಸ್ತ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಸ್ವಾತಂತ್ರ್ಯಪ್ರಿಯರ ಹಕ್ಕನ್ನು ಕಸಿಯುವ ಹುನ್ನಾರದ ಭಾಗವಾಗಿ ಇದು ಗೋಚರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಬಿಜೆಪಿಯ ಮಾಜಿ ಸಂಸದ ಅನಂತ ಕುಮಾರ ಹೆಗಡೆ ಸಂವಿಧಾನವನ್ನು ಬದಲಿಸುವ ಮಾತನ್ನು ಹೇಳಿದ್ದರು. ಈಗ ಆ ಮಾತನ್ನು ಆರ್‌ಎಸ್‍ಎಸ್‍ ವಕ್ತಾರರಂತಿರುವ ಪೇಜಾವರ ಶ್ರೀಗಳು ಹೇಳುತ್ತಿದ್ದಾರೆ. ಸಂವಿಧಾನವನ್ನು ಬದಲಿಸುವ ಮಾತು ಹೇಳುವ ಬದಲು ಈ ದೇಶದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆ ತೊಗಿಸಲು ಶ್ರೀಗಳು ಪ್ರಯತ್ನಿಸಬೇಕು. ಹಿಂದೂ ಧರ್ಮದಲ್ಲಿ ಹುಟ್ಟಿದ ಡಾ. ಬಿ.ಆರ್. ಅಂಬೇಡ್ಕರ್‌ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಹಿಂದೂ ಧರ್ಮದಲ್ಲಿ ನಾನು ಹುಟ್ಟಿರಬಹುದು. ಆದರೆ ಹಿಂದೂವಾಗಿ ಸಾಯಲು ಇಷ್ಟವಿಲ್ಲ ಎಂದು ಅವರು ಹೇಳಿದ್ದ ಮಾತಿನ ನೋವನ್ನು ಶ್ರೀಗಳು ಅರಿಯಬೇಕು ಎಂದು ತಿಳಿಸಿದ್ದಾರೆ.

ಹಿಂದೂ ಧರ್ಮದಲ್ಲಿರುವವರು ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವುದನ್ನು ತಡೆಬೇಕೆಂದು ಪೇಜಾವರ ಶ್ರೀಗಳಂತೆ ಹಲವು ಮಠಾಧೀಶರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ಹಿಂದೂ ಧರ್ಮದ ಪುರೋಹಿತಶಾಹಿಗಳು, ಸವರ್ಣೀಯರಿಂದ ಹಿಂದೂ ಧರ್ಮದ ಭಾಗವೆ ಆಗಿರುವ ದಲಿತರು, ಶೋಷಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಈ ಶ್ರೀಗಳು ಗಮನಹರಿಸಬೇಕು ಎಂದಿದ್ದಾರೆ.

- - - (ಸಾಂದರ್ಭಿಕ ಚಿತ್ರ)