ಸಾರಾಂಶ
ಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರಿಗೆ ಟಿಕೆಟ್ ಕೈತಪ್ಪಿದರೆ ನನಗೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮೀ ತುಂಗಳ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ನವನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದು, ಜಿಲ್ಲೆಯಿಂದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರಿಗೆ ಟಿಕೆಟ್ ಕೈತಪ್ಪಿದರೆ ನನಗೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮೀ ತುಂಗಳ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.ನವನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದು, ಜಿಲ್ಲೆಯಿಂದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರು.
ವೃತ್ತಿಯಲ್ಲಿ ವೈದ್ಯನಾಗಿರುವ ನಾನು ಕ್ಷೇತ್ರದಲ್ಲಿ ಅನೇಕ ಜನಪರ ಕಾರ್ಯಕ್ರಮ ಮಾಡಿದ್ದೇನೆ. ಬಿಜೆಪಿಯಲ್ಲಿ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದೇನೆ. ಪಕ್ಷದ ಅನೇಕ ಸಂಘಟನಾ ಚಟುವಟಿಕೆಯಲ್ಲಿ ಭಾಗವಹಿಸಿದ್ದೇನೆ. 2018ರಲ್ಲಿ ನಡೆದ ಜಮಖಂಡಿ ವಿಧಾನಸಭೆ ಉಪಚುನಾವಣೆಯಲ್ಲಿ ಕ್ಷೇತ್ರದ ಜವಾಬ್ದಾರಿ ನಿಭಾಯಿಸಿದ್ದು, ಲೋಕಸಭಾ ಚುನಾವಣೆಯಲ್ಲೂ ಪ್ರಬುದ್ಧರ ಸಮಾವೇಶ ಮಾಡಲಾಗಿದೆ. ಮೋದಿಯವರ ಹುಟ್ಟುಹಬ್ಬದ ದಿನ ರಕ್ತದಾನ ಶಿಬಿರ, ಉಚಿತ ಆರೋಗ್ಯ ಶಿಬಿರ, ಸಸಿ ನೆಡುವ ಕಾರ್ಯಕ್ರಮ ನಡೆಸಿದ್ದೇನೆ. ವಿಧಾನಸಭೆ, ಲೋಕಸಭೆ, ನಗರಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಮನೆ ಮನೆಗೆ ಹೋಗಿ ಪ್ರಚಾರ ನಡೆಸಿದ್ದೇನೆ ಎಂದು ಹೇಳಿದ ಅವರು, ಪಕ್ಷದ ಅನೇಕ ಕಾರ್ಯಕ್ರಮ ಸಂಘಟನಾತ್ಮಕ ಕೆಲಸಮಾಡುತ್ತಿದ್ದು, ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.ಈ ವೇಳೆ ಭಾಗ್ಯಶ್ರೀ ಹಂಡಿ, ಗೀತಾ ಸೂರ್ಯವಂಶಿ, ಪೂಜಾ ವಾಳ್ವೇಕಾರ, ಸಾವಿತ್ರಿ ಗೋರನಾಳ, ಸವಿತಾ ಕಲ್ಯಾಣಿ ಸುದ್ದಿಗೋಷ್ಠಿಯಲ್ಲಿದ್ದರು.