ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ

| Published : Feb 26 2024, 01:35 AM IST

ಸಾರಾಂಶ

ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಪಟ್ಟಣದ ವಿರೇಶ್ವರ ನಗರ ಬಡಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಭಾನುವಾರ ನಡೆದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆ ಈ ದೇಶದ ಭವಿಷ್ಯ ನಿರ್ಧರಿಸುತ್ತದೆ. ನಮ್ಮ ಗುರಿ ಮಾತ್ರ ನರೇಂದ್ರ ಮೋದಿ ಅವರನ್ನು ಗೆಲ್ಲಿಸುವುದು ಆಗಿರಲಿ. ಪ್ರತಿಯೊಬ್ಬ ಕಾರ್ಯಕರ್ತನು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅದಕ್ಕಾಗಿ ಎಂಪಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ತಪ್ಪದೆ ಮತ ನೀಡುವಂತೆ ಮನೆ-ಮನೆಗೆ ಹೋಗಿ ಕೋರಬೇಕು ಎಂದು ಮನವಿ ಮಾಡಿದರು.

ಈ ಗ್ರಾಮ ಚಲೋ ಅಭಿಯಾನದ ಮೂಲಕ ಬಿಜೆಪಿ ಕಾರ್ಯಕರ್ತರು ಎಲ್ಲ ಗ್ರಾಮಗಳ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಡಬೇಕು. ಜತೆಗೆ 2047ರ ಹೊತ್ತಿಗೆ ವಿಕಸಿತ ಭಾರತ ಸಂಕಲ್ಪದ ಬದ್ಧತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಶ್ರೀಶೈಲ ದೊಡಮನಿ, ಗೌರಮ್ಮ ಹುನಗುಂದ, ಸಂತೋಷ ಬಾದರಬಂಡಿ, ಶೇಖರ ಢವಳಗಿ, ರಾಜಶೇಖರ ಮ್ಯಾಗೇರಿ, ನಿರ್ಮಲಾ ಪುರಾಣಿಕಮಠ, ಅಶೋಕ ಸಜ್ಜನ, ಶರಣು ಪಡದಾಳಿ, ಗುರು ಕಡಿ, ದೀಪಕಸಿಂಗ್‌ ರಾಯಚೂರ, ಶಿವು ದಡ್ಡಿ, ಸೋಮು ಕಂಠಿ, ಮಲ್ಲು ಕಡಿ ಸೇರಿದಂತೆ ಹಲವರು ಇದ್ದರು.