ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ: ವಿ.ಸೋಮಣ್ಣ

| Published : Mar 30 2024, 12:52 AM IST

ಸಾರಾಂಶ

ದೇಶದ ರಕ್ಷಣೆಗೆ ಮತ್ತು ಉಳಿವಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಗುಬ್ಬಿ

ದೇಶದ ರಕ್ಷಣೆಗೆ ಮತ್ತು ಉಳಿವಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದರು.

ತಾಲೂಕಿನ ಹೇರೂರು ಬಾಲಾಜಿ ಕಲ್ಯಾಣ ಮಂಟಪದಲ್ಲಿ ಜಂಟಿ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಉಳಿವಿಗಾಗಿ ದೇವೇಗೌಡರು ಹಾಗೂ ನರೇಂದ್ರ ಮೋದಿಯವರ ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿ ಎರಡು ಪಕ್ಷಗಳು ಕಾಂಗ್ರೆಸ್ ವಿರುದ್ಧ ಹೋರಾಟವನ್ನು ಮಾಡುತ್ತಿವೆ. ನಾನು ರಾಜ್ಯಸಭೆ ಕೇಳಿದ್ದೆ ಆದರೆ ಬಿಜೆಪಿಯ ಮುಖಂಡ ರು ನನಗೆ ಲೋಕಸಭೆಯನ್ನು ನೀಡಿದ್ದು, ಅದರಂತೆ ನಾನು ಅಭ್ಯರ್ಥಿಯಾಗಿದ್ದೇನೆ. ನಾನು ಹೊರಗಿನವನು ಎಂಬ ಆರೋಪವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ. ನನಗೂ ತುಮಕೂರಿಗೂ ಅವಿನಾಭಾವ ನಂಟು ಇದ್ದು ಮುಂದಿನ ದಿನದಲ್ಲಿ ತುಮಕೂರಿನಲ್ಲಿ ವಾಸ್ತವ್ಯ ಹೂಡಲು ಸಹ ಬದ್ಧನಾಗಿದ್ದೇನೆ ಎಂದರು. ತುಮಕೂರು ಜಿಲ್ಲೆಯಲ್ಲಿ ಇದುವರೆಗೂ ಸರ್ಕಾರಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಇಲ್ಲ. ಶಿಕ್ಷಣಕ್ಕೆ ಮತ್ತು ಆರೋಗ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಕೆಲಸ ಮಾಡುತ್ತೇನೆ. ಗುಬ್ಬಿ ಕ್ಷೇತ್ರದ ಅಭಿವೃದ್ಧಿ ಬದ್ಧನಾಗಿದ್ದೇನೆ ಎಂದು ತಿಳಿಸಿದರು. ತುಮಕೂರು ಗ್ರಾಮಾಂತರದ ಶಾಸಕ ಸುರೇಶ್ ಗೌಡ ಮಾತನಾಡಿ, ಮುದ್ದಹನುಮೇಗೌಡರನ್ನ ಹರಕೆಯ ಕುರಿ ಮಾಡಿದ್ದಾರೆ. ಪರಮೇಶ್ವರ್ ಅವರಿಗೆ ಮುದ್ದನಮೇಗೌಡರನ್ನ ಗೆಲ್ಲಿಸಿಕೊಳ್ಳಬೇಕು ಎಂಬ ಮನಸ್ಸಿಲ್ಲ. ಇನ್ನು ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರು ಗುಬ್ಬಿಯಲ್ಲಿ ನಾವು ಲೀಡ್ ಕೊಡಲು ಸಾಧ್ಯವಿಲ್ಲ ಎಂದು ವೇದಿಕೆಯಲ್ಲೇ ಹೇಳಿಕೊಂಡಿದ್ದಾರೆ. ಖಂಡಿತ ಗೆಲುವು ಪಡೆಯುತ್ತೇವೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಹಾಲು-ಜೇನಿನಂತೆಯೇ ಇರುತ್ತವೆ ಎಂದು ತಿಳಿಸಿದರು. ಜೆಡಿಎಸ್ ಮುಖಂಡ ನಾಗರಾಜು, ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ, ಮುಖಂಡ ಜಿ.ಎನ್ ಬೆಟ್ಟಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸದ ಜಿಎಸ್ ಬಸವರಾಜು, ಎಂಎಲ್ಸಿ ಚಿದಾನಂದ ಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಪಂಚಾಕ್ಷರಿ, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕಿರಪ್ಪ, ಮುಖಂಡರಾದ ಚಂದ್ರಶೇಖರ್, ಗ್ಯಾಸ್ ಬಾಬು, ಪ್ರಭಣ್ಣ ಎನ್ ಸಿ ಪ್ರಕಾಶ್, ಗಂಗರಾಜು ಡಾ. ನವ್ಯ ಬಾಬು, ಸಿದ್ದಗಂಗಮ್ಮ ನಂಜೇಗೌಡ, ಸಾಗರನಹಳ್ಳಿ ವಿಜಯ್ ಕುಮಾರ್, ಬೈರಪ್ಪ, ಹೊನ್ನಗಿರಿ ಗೌಡ,ಕಳ್ಳಿಪಾಳ್ಯ ಲೊಕೇಶ್, ರಾಮಾಂಜನೇಯ, ಯೋಗಾನಂದ, ಬ್ಯಾಟರಂಗೆ ಗೌಡ,ಪ್ರಧಾನ ಕಾರ್ಯದರ್ಶಿ ಯತೀಶ್, ಸೇರಿದಂತೆ ಇನ್ನಿತರರು ಹಾಜರಿದ್ದರು.