ಚಿತ್ರದುರ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಪಲ್ಸ್ ಪೊಲೀಯೋ ಜಾಥಾಗೆ ಡಿಎಷ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಐದು ವರ್ಷದ ಒಳಗಿನ ಯಾವುದೇ ಮಗು ಪೋಲಿಯೋ ಲಸಿಕೆ ವಂಚಿತವಾಗಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ಜಿ.ಪಿ. ರೇಣುಪ್ರಸಾದ್ ಹೇಳಿದರು.ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ , ರೋಟರಿ ಕ್ಲಬ್ , ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಶನಿವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮುಖಾಂತರ ಚಾಲನೆ ನೀಡಿ ಮಾತನಾಡಿದರು.
ನವಜಾತ ಶಿಶುಗಳು ಸೇರಿದಂತೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಮಕ್ಕಳಿಗೆ ಹಾಕಿದ್ದರು ಸಹ ಪಲ್ಸ್ ಪೊಲಿಯೋ ದಿನದಂದು ತಪ್ಪದೆ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಲಸಿಕೆ ಹಾಕಿಸಬೇಕು. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ಪೋಲಿಯೋ ವೈರಾಣು ಮರುಕಳಿಸದಂತೆ ಸಾರ್ವಜನಿಕರಿಗೆ ಕರೆ ನೀಡಿದರು.ಜಿಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ ಅಭಿನವ ಮಾತನಾಡಿ, ಜಿಲ್ಲೆಯಲ್ಲಿ 4,12,426 ಮನೆಗಳ ಗುರುತಿಸಲಾಗಿದ್ದು ಇದಕ್ಕಾಗಿ 1169 ಬೂತ್ ತಂಡಗಳನ್ನು ರಚಿಸಿ 239 ಮೇಲ್ವಿಚಾರಕರನ್ನು ನಿಯೋಜಿಸಿ ಒಟ್ಟು ಐದು ವರ್ಷದೊಳಗಿನ, 1,26,361 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ರೋಟರಿ ಸಂಸ್ಥೆ, ರೆಡ್ ಕ್ರಾಸ್ ಸಂಸ್ಥೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಾಟ್ಸಪ್ಪ್, ವಿಡಿಯೋ ಗ್ರಾಮಾಂತರ ಪ್ರದೇಶಗಳಲ್ಲಿ ಸೇರಿದಂತೆ ನಗರ ಪ್ರದೇಶದಲ್ಲಿ, ಕಸದ ಗಾಡಿಗಳಲ್ಲಿ ಜಿಂಗಲ್ಸ್ ಆಡಿಯೋ ಮುಖಾಂತರ ವ್ಯಾಪಕ ಪ್ರಚಾರ ಕೈಗೊಂಡು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿ ಮಾಡೋಣ ಎಂದರು.
ಜಾಥಾವು ಜಿಲ್ಲಾ ಆಸ್ಪತ್ರೆ ಆವರಣದಿಂದ ಪ್ರಾರಂಭಗೊಂಡು ಮದಕರಿ ವೃತ್ತ, ಜಿಲ್ಲಾಧಿಕಾರಿಗಳ ವೃತ್ತದಿಂದ ಗಾಂಧಿ ಸರ್ಕಲ್ ವರೆಗೆ ತೆರಳಿ ಪುನಃ ಜಿಲ್ಲಾ ಆಸ್ಪತ್ರೆಗೆ ಕೊನೆಗೊಂಡಿತು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ತಾಲೂಕಾ ಆರೋಗ್ಯ ಅಧಿಕಾರಿ ಬಿ ವಿ ಗಿರೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ಡಿವೈಡಿಎಚ್ಇಒ ಗೌರಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀನಿವಾಸ್ ಮೂರ್ತಿ, ನಾಗರಾಜ, ಡಿಪಿಎಂ ಮ್ಯಾನೇಜರ್ ಪ್ರಫುಲ್ಲ ಚಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರಸನ್ನಕುಮಾರ, ಗಂಗಾಧರ ರೆಡ್ಡಿ, ಶಿರೀಶ್, ರುದ್ರಮುನಿ, ರೆಡ್ ಕ್ರಾಸ್ ಸಂಸ್ಥೆ ಪದಾಧಿಕಾರಿಗಳಾದ ಶಿವರಾಂ, ಮಜಾಹರ್ ಬಾಷಾ, ರೋಟರಿ ಕ್ಲಬ್ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಇದ್ದರು.