ಸಾರಾಂಶ
ಶೃಂಗೇರಿ, ನಾಗರಿಕ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರ ಮೇಲೆ ಋಣವಿದೆ. ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜೆಸಿಐ ಅಧ್ಯಕ್ಷ ಎಚ್.ಜೆ.ರಾಘವೇಂದ್ರ ಹೇಳಿದರು.
ಪಟ್ಟಣದಲ್ಲಿ ನಡೆದ ಜೆಸಿಐ ಸಂಸ್ಥೆ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಕನ್ನಡಪ್ರಭ ವಾರ್ತೆ, ಶೃಂಗೇರಿನಾಗರಿಕ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರ ಮೇಲೆ ಋಣವಿದೆ. ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜೆಸಿಐ ಅಧ್ಯಕ್ಷ ಎಚ್.ಜೆ.ರಾಘವೇಂದ್ರ ಹೇಳಿದರು.
ಪಟ್ಟಣದಲ್ಲಿ ನಡೆದ ಜೆಸಿಐ ಸಂಸ್ಥೆ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು. ಸಮಾಜ ನಮಗೇನು ನೀಡಿತು ಎನ್ನುವುದು ಮುಖ್ಯವಲ್ಲ. ಸಮಾಜಕ್ಕೆ ನಾವೇನು ಕೊಡು ನೀಡಬಲ್ಲೆವು ಎಂಬುದು ಮುಖ್ಯ. ಆದ್ದರಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಜೆಸಿಐ ಸಂಸ್ಥೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ, ಪರೀಕ್ಷೆ ಎದುರಿಸುವುದು ಹೇಗೆ, ಆರೋಗ್ಯ, ಕಾನೂನು, ಪರಿಸರ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಸಮಾಜ ಸೇವೆಯೇ ಸಂಸ್ಥೆ ಮುಖ್ಯ ಧ್ಯೇಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ವಿ.ಎಸ್.ಅಶೋಕ್, ಕಾರ್ಯದರ್ಶಿಯಾಗಿ ಅನ್ವಿತ್ ಕಾಮತ್, ಖಜಾಂಚಿಯಾಗಿ ಚೇತನ್ ಸೇರಿದಂತೆ ಪ್ರಸಕ್ತ ಸಾಲಿನ ಪದಾಧಿಕಾರಿಗಳಾಗಿ ಸುಜಿತ್, ರಾಘವೇಂದ್ರ, ರಮೇಶ್, ಶ್ರೀಕಾಂತ್, ಮೋಹನ್ ಬಿ, ಅನಂತಕೃಷ್ಣ ಹೆಬ್ಬಾರ್ ಮತ್ತಿತರರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಶೂನ್ಯ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.21 ಶ್ರೀ ಚಿತ್ರ -
ಶೃಂಗೇರಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಜೆಸಿ ಅಧ್ಯಕ್ಷ ಎಚ್.ಜಿ.ರಾಘವೇಂದ್ರ ಮಾತನಾಡಿದರು.