ಸಾರಾಂಶ
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ನರಗುಂದ
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.3233ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿದರು.
ಈ ಹಿಂದೆ ದಿ. ಅಟಲ್ ಬಿಹಾರಿ ವಾಜಪೇಯಿಯವರು ಈ ದೇಶದ ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಾವಿರಾರು ಟಿಎಂಸಿ ನೀರು ನದಿಗಳ ಮೂಲಕ ಹರಿದು ಸಮುದ್ರ ಸೇರಿ ವ್ಯರ್ಥವಾಗುವುದನ್ನು ಕಂಡು ಅದನ್ನು ಕೃಷಿಗೆ ಸದ್ಬಳಕೆ ಮಾಡಿಕೊಳ್ಳು ನಿಟ್ಟಿನಲ್ಲಿ ಚಿಂತನೆ ಮಾಡಿದ್ದರು. ದೇಶದ ನಾಲ್ಕು ದಿಕ್ಕುಗಳಲ್ಲಿ ಯಾವ ರೀತಿ ಬಳಕೆ ಮಾಡಿಕೊಳ್ಳಬೇಕು ಎನ್ನುವ ನೀಲಿ ನಕ್ಷೆ ತಯಾರಿಸಿದ್ದರು. ಆದರೆ, ಕಾರಣಾಂತರದಿಂದ ಅವರ ಕನಸು ನನಸಾಗಲಿಲ್ಲ. ಆದ್ದರಿಂದ ಈಗಲೂ ಕಾಲ ಮಿಂಚಿಲ್ಲ. 3ನೇ ಬಾರಿ ಪ್ರಧಾನಿಗಳಾಗಿ ಅಧಿಕಾರ ವಹಿಸಿಕೊಂಡು ನರೇಂದ್ರ ಮೋದಿಯವರು ವಿವಿಧ ರಾಜ್ಯಗಳಲ್ಲಿ ವ್ಯರ್ಥವಾಗುವ ನೀರನ್ನು ಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಪರಶುರಾಮ ಜಂಬಗಿ, ಎಸ್.ಬಿ. ಜೋಗಣ್ಣವರ, ಸುಭಾಸ ಗಿರಿಯಣ್ಣವರ, ರಾಘವೇಂದ್ರ ಗುಜಮಾಗಡಿ, ಹನುಮಂತ ಸರನಾಯ್ಕರ, ಸೋಮಲಿಂಗಪ್ಪ ಆಯಿಟ್ಟಿ, ಮಲ್ಲೇಶ ಅಣ್ಣಿಗೇರಿ, ಅರ್ಜುನ ಮಾನೆ, ಯಲ್ಲಪ್ಪ ಚಲವಣ್ಣವರ, ಶಂಕ್ರಪ್ಪ ಜಾಧವ, ಶಿವಪ್ಪ ಸಾತಣ್ಣವರ, ಅನಸವ್ವ ಶಿಂದೆ, ನಾಗರತ್ನಾ ಸವಳಬಾವಿ, ವಾಸು ಚವಾಣ, ವಿಜಯಕುಮಾರ ಹೂಗಾರ, ಇದ್ದರು.