ಪ್ರಜ್ವಲ್‌ಗೆ ಶಿಕ್ಷೆಯಾಗಲಿ: ಯುವ ಕಾಂಗ್ರೆಸ್ ಆಗ್ರಹ

| Published : May 01 2024, 01:19 AM IST

ಪ್ರಜ್ವಲ್‌ಗೆ ಶಿಕ್ಷೆಯಾಗಲಿ: ಯುವ ಕಾಂಗ್ರೆಸ್ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನ ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಜೆಡಿಎಸ್‌- ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ ಡ್ರೈವ್ ವಿಚಾರ ರಾಜ್ಯ ಮಾತ್ರವಲ್ಲದೆ ದೇಶದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ: ದುರ್ಗಾ ಚರಣ್ ಹೇಳಿದರು.

ಕನ್ನಡಪ್ರಭವಾರ್ತೆ ಕೊಪ್ಪ

ಹಾಸನ ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಜೆಡಿಎಸ್‌- ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ ಡ್ರೈವ್ ವಿಚಾರ ರಾಜ್ಯ ಮಾತ್ರವಲ್ಲದೆ ದೇಶದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾ ಚರಣ್ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಪಕ್ಷಗಳ ಸೈದ್ಧಾಂತಿಕ ವಿಚಾರಗಳು ಬೇರೆ ಇದ್ದರೂ, ಪ್ರಜ್ವಲ್ ಮಾಜಿ ಪ್ರಧಾನಿ ದೇವೇಗೌಡ ಅವರ ಮೊಮ್ಮಗ, ಕಿರಿಯ ಸಂಸದ. ಸಂಸತ್‌ನಲ್ಲಿ ಕರ್ನಾಟಕದ ಧ್ವನಿಯಾಗಬಲ್ಲರು ಎಂದು ಯುವ ಜನರು ಹೆಮ್ಮೆಪಟ್ಟಿದ್ದರು. ಆದರೆ ದೇಶ ಹಾಗೂ ರಾಜ್ಯವನ್ನು ಮಾತ್ರವಲ್ಲದೆ ಪ್ರಕೃತಿ ಹಾಗೂ ನದಿ, ತೋರೆಗಳನ್ನು ಮಹಿಳೆಯರ ಹೆಸರಿನಿಂದಲೇ ಕರೆದು ಗೌರವಿಸುವ ಕನ್ನಡಿಗ ಸಹಸ್ರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ತನ್ನ ಖಾಸಗಿ ಫೋನಿನಲ್ಲಿ ಚಿತ್ರೀಕರಿಸಿಕೊಂಡಿರುವ ಪ್ರಜ್ವಲ್ ಕೃತ್ಯ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಯುವ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದರು.ಎಸ್.ಐ.ಟಿ. ರಚಿಸಿರುವುದು ಸ್ವಾಗತಾರ್ಹವಾಗಿದೆ ಎಂದ ಅವರು ೩ ಸಾವಿರಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನಲಾದ ಪ್ರಜ್ವಲ್ ಅವರ ವಿರುದ್ಧ ಕಠಿಣ ಕ್ರಮ ವಹಿಸಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ ಎಂದರು.

ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಂತೋಷ್ ಕುಲಾಸೋ, ಮುಖಂಡರಾದ ವಿಜಯಾನಂದ, ಗುರುನಂದನ್, ನರ್ತನ್, ಲೇಖನ್, ಮನೋಜ್, ಅವಿನಾಶ್ ಮತ್ತಿತರರು ಇದ್ದರು.