ಪ್ರಸಾದ್ ರಾಜ್ ಕಾಂಚನ್‌ ಶಾಸಕರ ಮನೆಗೆ ಮುತ್ತಿಗೆ ಹಾಕಲಿ: ಹಿಂದೂ ಯುವ ಸೇನೆ

| Published : Jul 25 2025, 01:13 AM IST

ಸಾರಾಂಶ

ಕಾಂಗ್ರೆಸ್ ಪಕ್ಷದ ಪ್ರಸಾದ್ ಕಾಂಚನ್ ಶಾಸಕರನ್ನು ಟೀಕಿಸುವ ಭರದಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದು, ಅವರಿಗೆ ತಾಕತ್ತು ಇದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಿ, ಅದಕ್ಕೆ ತಕ್ಕ ಉತ್ತರ ನೀಡಲು ಜಿಲ್ಲೆಯ ಹಿಂದೂ ಕಾರ್ಯಕರ್ತರು ಸಿದ್ಧ ಎಂದು ಹಿಂದೂ ಯುವ ಸೇನೆ ಉಡುಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

ಕನ್ನಡಪ್ರಭ ವಾರ್ತೆ ಉಡುಪಿ ಕಾಂಗ್ರೆಸ್ ಪಕ್ಷದಲ್ಲಿ ಬಾಲಿಶ ಹೇಳಿಕೆ ನೀಡುತ್ತಿರುವ ಪ್ರಸಾದ್ ಕಾಂಚನ್ ಶಾಸಕರನ್ನು ಟೀಕಿಸುವ ಭರದಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದು, ಅವರಿಗೆ ತಾಕತ್ತು ಇದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಿ, ಅದಕ್ಕೆ ತಕ್ಕ ಉತ್ತರ ನೀಡಲು ಜಿಲ್ಲೆಯ ಹಿಂದೂ ಕಾರ್ಯಕರ್ತರು ಸಿದ್ಧ ಎಂದು ಹಿಂದೂ ಯುವ ಸೇನೆ ಉಡುಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

ಸದಾ ಹಿಂದೂ ಧಾರ್ಮಿಕ ಭಾವನೆಗಳನ್ನು ಅವಹೇಳನ ಮಾಡುತ್ತಾ ಬಂದಿರುವ ಪ್ರಸಾದ್ ರಾಜ್ ಕಾಂಚನ್ ಕರಾವಳಿ ಜಿಲ್ಲೆಯಲ್ಲಿ ಹಿಂದುತ್ವದ ವಿಚಾರದಲ್ಲಿ ಸದಾ ಮುಂಚೂಣಿಯಲ್ಲಿರುವ ಉಡುಪಿ ಶಾಸಕರನ್ನು ಏಕವಚನದಲ್ಲಿ ಟೀಕಿಸುತ್ತಾ ಬಿಟ್ಟಿ ಪ್ರಚಾರ ಬಯಸುವ ಚಟವನ್ನು ತಕ್ಷಣ ನಿಲ್ಲಿಸಲಿ ಎಂದು ಹೇಳಿದೆ.

ಉಡುಪಿ ಶಾಸಕರು ಹಿಂದೂತ್ವ, ರಾಷ್ಟ್ರೀಯತೆ, ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜೀ ಮಾಡಿಲ್ಲ. ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಮಸೂದೆ ಬಗ್ಗೆ ಸದನದಲ್ಲಿ ವಿರೋಧ ಪಕ್ಷದ ಶಾಸಕನಾಗಿ ವಿರೋಧ ಮಾಡಿದಕ್ಕೆ ಸದನದಿಂದ ಅಮಾನತುಗೊಂಡರೂ ತಮ್ಮ ಸಿದ್ಧಾಂತದ ಬಗ್ಗೆ ಬದ್ಧತೆ ಮೆರೆದಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿದಲ್ಲಿ ನಿಮ್ಮ ಮನೆಗೆ ಮುತ್ತಿಗೆ ಹಾಕುವ ಅವಕಾಶ ನೀಡಬೇಡಿ ಎಂದು ಹಿಂದೂ ಯುವ ಸೇನೆ ಉಡುಪಿ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಹಿರಿಯಡ್ಕ, ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ಉಡುಪಿ ನಗರ ಅಧ್ಯಕ್ಷ ಸುನೀಲ್ ಪೂಜಾರಿ ನೇಜಾರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.