ಸಾರಾಂಶ
ಗುಣಮಟ್ಟದ ಶಿಕ್ಷಣ ಪಡೆಯಲು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತದೆ. ಆದ್ದರಿಂದ ಗುಣಾತ್ಮಕ ಶಿಕ್ಷಣವನ್ನು ಕಿರಿಯ ಪ್ರಾಥಮಿಕ ಶಾಲೆಯಿಂದಲೇ ಆರಂಭಿಸಿ, ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ದರ್ಜೆಯಲ್ಲಿ ವ್ಯಾಸಂಗದಲ್ಲಿ ಮುಂದೆ ಬನ್ನಿ ಎಂದು ಶಾಸಕ ಎ. ಮಂಜು ಸಲಹೆ ನೀಡಿದರು. ಇತ್ತೀಚಿನ ಕಾಲಘಟ್ಟದಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಿಕ್ಷಣ ಯಾವ ಕಾನ್ವೆಂಟ್‌ಗಳಿಗೂ ಕಡಿಮೆ ಇಲ್ಲದಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ನಮ್ಮ ಗುರಿಯಾಗಿದೆ ಎಂದು ಮಂಜು ತಿಳಿಸಿದರು.
ಕನ್ನಡಪ್ರಭ ವಾರ್ತೆ ರಾಮನಾಥಪುರ
ಗುಣಮಟ್ಟದ ಶಿಕ್ಷಣ ಪಡೆಯಲು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತದೆ. ಆದ್ದರಿಂದ ಗುಣಾತ್ಮಕ ಶಿಕ್ಷಣವನ್ನು ಕಿರಿಯ ಪ್ರಾಥಮಿಕ ಶಾಲೆಯಿಂದಲೇ ಆರಂಭಿಸಿ, ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ದರ್ಜೆಯಲ್ಲಿ ವ್ಯಾಸಂಗದಲ್ಲಿ ಮುಂದೆ ಬನ್ನಿ ಎಂದು ಶಾಸಕ ಎ. ಮಂಜು ಸಲಹೆ ನೀಡಿದರು.ರಾಮನಾಥಪುರ ಬಸವೇಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಸಹಪಾಠಿಯ ಚಟುವಟಿಕೆಗಳ ಉದ್ಘಾಟನೆ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಅರಕಲಗೂಡು ತಾಲೂಕಿನಲ್ಲಿ ಈಗಾಗಲೇ ಹಿರಿಯ ವಿದ್ಯಾರ್ಥಿಗಳ ಸಮಿತಿಯವರು ಹಾಗೂ ನಮ್ಮ ಕುಟುಂಬದವರು ಸೇರಿ 17 ಶಾಲೆಗಳಲ್ಲಿ ಮಕ್ಕಳ ಮನೆ, ಶಾಲೆಗಳು ಇದ್ದು, ಇತ್ತೀಚಿನ ಕಾಲಘಟ್ಟದಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಿಕ್ಷಣ ಯಾವ ಕಾನ್ವೆಂಟ್‌ಗಳಿಗೂ ಕಡಿಮೆ ಇಲ್ಲದಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ನಮ್ಮ ಗುರಿಯಾಗಿದೆ ಎಂದು ಮಂಜು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್. ಸರ್ವಮಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೆ. ಕೃಷ್ಣೇಗೌಡ, ರೂಪದೇವಿ, ಸದಸ್ಯರಾದ ಮೈಕ್ ಮಂಜು, ಕುಮಾರಸ್ವಾಮಿ, ದೇವಕಿ ಚಂದ್ರಶೇಖರ್ , ಭರತ್, ಗಂಗೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಕುಮಾರ್, ನಿತೃತ್ತ ಉಪಾನ್ಯಾಸಕರು ಸ್ವಾಮಿ, ಸಿದ್ದರಾಜು ಶಾಸಕರ ಸಹಾಯಕರು ಸುನೀಲ್, ಮಂಜುನಾಥ್, ಮುಂತಾದವರು ಉಪಸ್ಥಿತರಿದ್ದರು.