ರಮೇಶ ಜಿಗಜಿಣಗಿ ಬಂಜಾರ ಸಮಾಜದ ಕ್ಷಮೆ ಕೇಳಲಿ

| Published : Apr 02 2024, 01:05 AM IST

ರಮೇಶ ಜಿಗಜಿಣಗಿ ಬಂಜಾರ ಸಮಾಜದ ಕ್ಷಮೆ ಕೇಳಲಿ
Share this Article
  • FB
  • TW
  • Linkdin
  • Email

ಸಾರಾಂಶ

ಇಂಡಿ: ನನಗೆ ಬಂಜಾರ ಸಮುದಾಯದ ಮತ ಬೇಡ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಬಂಜಾರ ವಿರೋಧಿ ಎಂಬುದನ್ನು ಸಾಬೀತು ಮಾಡಿದ್ದು, ಬಂಜಾರ ಸಮುದಾಯದ ಮುಖಂಡರು ಪಕ್ಷಾತೀತವಾಗಿ ಈ ಬಾರಿ ಬಿಜೆಪಿ ವಿರೋಧಿಸಬೇಕು. ಬಿಜೆಪಿ ಅಭ್ಯರ್ಥಿಗೆ ತಕ್ಕಪಾಠ ಕಲಿಸಬೇಕು ಎಂದು ಆಲ್‌ ಇಂಡಿಯಾ ಬಂಜಾರ ಸೇವಾ ಸಂಘದ ತಾಲೂಕು ಅಧ್ಯಕ್ಷ ಸಂಜೀವ ಚವ್ಹಾಣ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ನನಗೆ ಬಂಜಾರ ಸಮುದಾಯದ ಮತ ಬೇಡ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಬಂಜಾರ ವಿರೋಧಿ ಎಂಬುದನ್ನು ಸಾಬೀತು ಮಾಡಿದ್ದು, ಬಂಜಾರ ಸಮುದಾಯದ ಮುಖಂಡರು ಪಕ್ಷಾತೀತವಾಗಿ ಈ ಬಾರಿ ಬಿಜೆಪಿ ವಿರೋಧಿಸಬೇಕು. ಬಿಜೆಪಿ ಅಭ್ಯರ್ಥಿಗೆ ತಕ್ಕಪಾಠ ಕಲಿಸಬೇಕು ಎಂದು ಆಲ್‌ ಇಂಡಿಯಾ ಬಂಜಾರ ಸೇವಾ ಸಂಘದ ತಾಲೂಕು ಅಧ್ಯಕ್ಷ ಸಂಜೀವ ಚವ್ಹಾಣ್‌ ಹೇಳಿದರು.ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ ಜಿಗಜಿಣಗಿ ಅವರು ತಮ್ಮ ರಾಜಕಾರಣದಲ್ಲಿ ಬಂಜಾರ ಸಮಾಜ ತುಳಿಯಲು ಪ್ರಯತ್ನಿಸಿದ್ದಾರೆ. ಬಂಜಾರ ಸಮಾಜದವರು ಎಚ್ಚೆತ್ತುಕೊಳ್ಳಬೇಕು. ಸಮಾಜದ ಹಿತದೃಷ್ಟಿಯಿಂದ ವಿಜಯಪುರದ ಬಿಜೆಪಿ ಅಭ್ಯರ್ಥಿಯನ್ನು ವಿರೋಧಿಸುವ ಕೆಲಸ ಆರಂಭಿಸಬೇಕು. ಮುಂಬರುವ ಚುನಾವಣೆಯಲ್ಲಿ ಬಂಜಾರ ಸಮುದಾಯದವರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಹಿರಿಯ ರಾಜಕಾರಣಿಯಾಗಿ ಎಲ್ಲ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗುವುದನ್ನು ಬಿಟ್ಟು ಒಂದು ಸಮಾಜದ ವಿರೋಧಿ ಧೋರಣೆ ತಳೆದಿದ್ದಾರೆ ಎಂದು ಚವಾಣ್‌ ದೂರಿದರು. ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಬಂಜಾರ ಸಮುದಾಯದವರು ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಅಭ್ಯರ್ಥಿಗೆ ತಕ್ಕ ಪಾಠ ಕಲಿಸಬೇಕು, ಬಿಜೆಪಿ ಅಭ್ಯರ್ಥಿ ಬಂಜಾರ ಸಮುದಾಯಕ್ಕೆ ಕ್ಷಮೆ ಕೇಳಬೇಕು ಎಂದು ಹೇಳಿದರು.

ತಾಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಹಿರೇಬೇವನೂರ ಗ್ರಾಪಂ ಅಧ್ಯಕ್ಷೆ ಶೈಲಜಾ ಜಾಧವ, ಬಂಜಾರ ಸಮಾಜದ ಮುಖಂಡರಾದ ಸಂಜೀವ ಚವಾಣ್‌, ಸಂಜೀವ ಜಾಧವ, ರಂಗನಾಥ ಚವ್ಹಾಣ ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.