ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಲಿ: ಶ್ರೀಕಾಂತ್

| Published : Oct 02 2024, 01:08 AM IST

ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಲಿ: ಶ್ರೀಕಾಂತ್
Share this Article
  • FB
  • TW
  • Linkdin
  • Email

ಸಾರಾಂಶ

ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮ್‌ರಾವ್ ರಾಮ್‌ಜೀ ಪ್ರೌಢಶಾಲೆಯಲ್ಲಿ ಕಸಾಪ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ವಿಷಯದಲ್ಲಿ ಶೇ.100 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸಿಪಿಐ ಶ್ರೀಕಾಂತ್ ಉದ್ಘಾಟಿಸಿದರು. ಬಿಇಒ ಮಾರಯ್ಯ, ಲೋಕೇಶ್ ಸೀಗಡಿ ಇದ್ದರು.

ಕನ್ನಡಪ್ರಭ ವಾರ್ತೆ ಯಳಂದೂರುಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭಾವಂತರಿದ್ದು, ಅವಕಾಶಗಳ ಕೊರತೆಯಿದ್ದು, ಇಂತಹ ಮಕ್ಕಳಿಗೂ ಮೌಲ್ಯಯುತ ಶಿಕ್ಷಣ ಸಿಗಬೇಕು ಎಂದು ಆರಕ್ಷಕ ವೃತ್ತ ನಿರೀಕ್ಷಕ ಆರ್.ಶ್ರೀಕಾಂತ್ ಕರೆ ನೀಡಿದರು.ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮ್‌ರಾವ್ ರಾಮ್‌ಜೀ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಾಲೆಯ ಸಹಯೋಗದೊಂದಿಗೆ 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ದಾನಿಗಳಿಂದ ರಾಮ್ ಜೀ ಪ್ರೌಢಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರೌಢವ್ಯವಸ್ಥೆಯ ಮಕ್ಕಳ ಮನಸ್ಸು ಚಂಚಲವಾಗಿರುತ್ತದೆ. ಇಂತಹ ಸಮಯದಲ್ಲಿ ಕಲಿಕೆಯಲ್ಲಿ ಹೆಚ್ಚು ಆಸಕ್ತಿವಹಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷಕರು ಮಾರ್ಗದರ್ಶಕರಾಗಬೇಕು ಆಗ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮುತ್ತಾರೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ಮಾತನಾಡಿ, ಕಸಾಪ ವತಿಯಿಂದ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ. ಭಾಷಾ ವಿಷಯದಲ್ಲಿ ಶೇ. 100ರಷ್ಟು ಅಂಕಗಳಿಕೆ ಕಷ್ಟವಾಗಿದ್ದು ಗ್ರಾಮೀಣ ಭಾಗದ ಮಕ್ಕಳು ಈ ಸಾಧನೆ ಮಾಡಿರುವುದು ವಿಶೇಷವಾಗಿದೆ ಎಂದರು.ಕಸಾಪ ತಾಲೂಕು ಅಧ್ಯಕ್ಷ ಯರಿಯೂರು ಎನ್. ನಾಗೇಂದ್ರ, ಬಿಆರ್‌ಸಿ ನಂಜುಂಡಯ್ಯ, ಶಾಲೆಯ ಮುಖ್ಯ ಶಿಕ್ಷಕ ಕೆ.ಎನ್. ಪ್ರಮೋದ್ ಚಂದ್ರನ್ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಆರ್. ಪುಟ್ಟಬಸವಯ್ಯ ಈ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಿದರು.

ಸಮಾಜ ಸೇವಕ, ಉದ್ಯಮಿ ಗಣಿಗನೂರು ಲೋಕೇಶ್ ಸೀಗಡಿ ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಿದರು. ಕ್ರೀಡೆಯಲ್ಲಿ ಸಾಧನೆ ಮಾಡಿದ ಇದೇ ಶಾಲೆಯ ವಿದ್ಯಾರ್ಥಿಗಳಿಗೆ ಸಂತೇಮರಹಳ್ಳಿ ಗ್ರಾಪಂ ಸದಸ್ಯ ಶಿವಕುಮಾರ್ ಉಚಿತವಾಗಿ ಟ್ರ್ಯಾಕ್ ಸೂಟ್‌ಗಳನ್ನು ವಿತರಣೆ ಮಾಡಿದರು. ಗ್ರಾಪಂ ಉಪಾಧ್ಯಕ್ಷೆ ಭಾಗ್ಯಮ್ಮ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ. ವೀರಭದ್ರಸ್ವಾಮಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ. ಮಂಜುನಾಥ್, ಕರವೇ ಜಿಲ್ಲಾ ಉಪಾಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಗ್ರಾಪಂ ಮಾಜಿ ಅಧ್ಯಕ್ಷ ಗೌಡಹಳ್ಳಿ ರವಿ, ಪಪಂ ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ಸತೀಶ್, ಚೇತನ್, ಡಾ. ನಿಖಿತಾ ಅನುರಾಧ, ಡಾ. ಪ್ರೇಮ, ರಾಧಾ, ಕಸಾಪ ಕಾರ್ಯದರ್ಶಿ ಡಿ.ಪಿ. ಮಹೇಶ್, ಗುಂಬಳ್ಳಿ ಬಸವರಾಜು, ವೈ.ಎಂ. ಭಾನುಪ್ರಕಾಶ್, ಚಾಮಲಾಪುರ ವಿಜಯ್, ಮಹದೇವ್‌ಸಿಂಗ್ ಸೇರಿದಂತೆ ಅನೇಕರು ಇದ್ದರು.