ಸಾರಾಂಶ
ತರೀಕೆರೆ, 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ಹೇಳಿದರು.
20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ತರೀಕೆರೆ20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ಹೇಳಿದರು.ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಾಸಕರ ಕಾರ್ಯಾಲಯದಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ನೆರವೇರಿಸಿ ಮಾತನಾಡಿದರು. 15ವರ್ಷಗಳ ನಂತರ ತರೀಕೆರೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ಸುಮಾರು 2000 ಪ್ರತಿನಿಧಿಗಳು ಭಾಗವಹಿಸಲಿದ್ದು, ಪ್ರತಿನಿಧಿಗಳಿಗೆ ವಸತಿ, ಊಟ ವ್ಯವಸ್ಥೆ ನಿರ್ವಹಿಸಲಾಗುತ್ತಿದೆ. ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಸಮ್ಮೇಳನದ ಕಾರ್ಯಕ್ರಮದ ವಿವರ ನೀಡಿ ಮಾತನಾಡಿ ಮಾರ್ಜ್ 7 - 8 ರಂದು ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ರಾಷ್ಟ್ರದ್ವಜ, ಪರಿಷತ್ತಿನ ಧ್ವಜ ಮತ್ತು ನಾಡ ದ್ವಜಾರೋಹಣ ನಡೆಯುತ್ತಿದೆ. ನಂತರ ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಸಮಾರಂಭ, ವಿವಿಧ ಗೋಷ್ಟಿಗಳು, ಸಾಂಸ್ಕೃತಿಕ ಚಿಲಿಪಿಲಿ-ಸಂಜೆ ಕಲರವ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ಸಮಾರೋಪ ಸಮಾರಂಭ, ಸಾಧನೆ ಮನ್ನಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿದಳವಾಯಿ ಮಾತನಾಡಿ 15 ವರ್ಷದ ನಂತರ ತರೀಕೆರೆ ಪಟ್ಟಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಎಲ್ಲ ಕನ್ನಡಿಗರು ಸೇರಿ ಕನ್ನಡ ತೇರನ್ನು ಎಳೆಯೋಣ, ಸಮ್ಮೇಳನದ ಔಚಿತ್ಯ ವನ್ನು ಜನರಿಗೆ ತಿಳಿಸೋಣ ಎಂದು ಹೇಳಿದರು.ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಜೃಂಭಣೆ ಯಿಂದ ಆಚರಿಸೋಣ ಎಂದು ತಿಳಿಸಿದ ಅವರು ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಸಂಚಾಲಕ ಇಮ್ರಾನ್ ಅಹಮದ್ ಬೇಗ್, ಸೈಯದ್ ಮುಹೀಬುಲ್ಲಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನವೀನ್ ಪೆನ್ನಯ್ಯ, ಕನ್ನಡಶ್ರೀ ಬಿ.ಎಸ್.ಭಗವಾನ್, ಪುರಸಭೆ ಮಾಜಿ ಸದಸ್ಯ ಮಿಲ್ತ್ರಿ ಶ್ರೀನಿ ವಾಸ್, ಕೆ.ಎಸ್.ಶಿವಣ್ಣ, ಕಸಾಹಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಕಿರಣ್ ಮತ್ತಿತರರು ಭಾಗವಹಿಸಿದ್ದರು.1ಕೆಟಿಆರ್.ಕೆ.3ಃ
ತರೀಕೆರೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು. ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಜಿಲ್ಲಾ ಕಸಾಪ ಪ್ರಧಾನ ಸಂಚಾಲಕ ಇಮ್ರಾನ್ ಅಹಮದ್ ಬೇಗ್, ತಾಲೂಕು ಕಸಾಪ ಅಧ್ಯಕ್ಷರು ರವಿ ದಳವಾಯಿ, ಕನ್ನಡಶ್ರೀ ಬಿ.ಎಸ್.ಭಗವಾನ್ ಮತ್ತಿತರರು ಇದ್ದರು.