ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಸತ್ಯಾಗ್ರಹ ಯಾವುದೇ ಕಾರಣಕ್ಕೂ ಮುಕ್ತಾಯಗೊಳಿಸಬಾರದು. ನಮ್ಮ ಜಿಲ್ಲೆಯಿಂದ ನಿಯೋಗದಲ್ಲಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಒಳಗೊಂಡಂತೆ ಹೋರಾಟಗಾರರ ಸಮೇತ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿಕೊಂಡು ಬರೋಣ. ನಿಯೋಗದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಲು ನಾನು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಸತ್ಯಾಗ್ರಹ ಯಾವುದೇ ಕಾರಣಕ್ಕೂ ಮುಕ್ತಾಯಗೊಳಿಸಬಾರದು. ನಮ್ಮ ಜಿಲ್ಲೆಯಿಂದ ನಿಯೋಗದಲ್ಲಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಒಳಗೊಂಡಂತೆ ಹೋರಾಟಗಾರರ ಸಮೇತ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿಕೊಂಡು ಬರೋಣ. ನಿಯೋಗದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಲು ನಾನು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಹೇಳಿದರು.ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿ ಮಾತನಾಡಿದ ಅವರು, ನಮಗೆ ನಮ್ಮ ಜಿಲ್ಲೆಯ ಜನತೆಯ ಸುರಕ್ಷತೆ ಮುಖ್ಯ. ಇದರಲ್ಲಿ ರಾಜಕಾರಣ ಸಲ್ಲದು. ನಿಮ್ಮ ಹೋರಾಟದ ಜೊತೆಗೆ ಬೆನ್ನಲುಬಾಗಿ ನಾನು ಹೋರಾಟಕ್ಕೆ ಕೈ ಜೋಡಿಸುವೆ. ಈಗಾಗಲೇ ನಾನು ಇಬ್ಬರೂ ಸಚಿವರು ಹಾಗೂ ಜಿಲ್ಲೆಯ ಶಾಸಕರ ಮನವೊಲಿಸುವ ಕೆಲಸ ಮಾಡಿದ್ದೇನೆ. ಆದಷ್ಟು ಬೇಗ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಲಿದೆ ಎಂದು ಭರವಸೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಸದಸ್ಯರಾದ ಅರವಿಂದ ಕುಲಕರ್ಣಿ, ಅನಿಲ ಹೊಸಮನಿ, ಮಲ್ಲಿಕಾರ್ಜುನ.ಹೆಚ್.ಟಿ, ಸಿದ್ದಲಿಂಗ ಬಾಗೇವಾಡಿ, ಮಲ್ಲಿಕಾರ್ಜುನ ಕೆಂಗನಾಳ, ಶಿವಬಾಳಮ್ಮ ಕೊಂಡಗೂಳಿ ಸೇರಿದಂತೆ ಇನ್ನು ಮುಂತಾದವರು ಉಪಸ್ಥಿತರಿದ್ದರು.