ಶಿಕ್ಷಣದ ಮೂಲಕ ಮೋದಿ ಕನಸಿನ ವಿಕಸಿತ ಭಾರತ ನಿರ್ಮಿಸೋಣ: ಯಶ್ಪಾಲ್ ಸುವರ್ಣ

| Published : Nov 15 2024, 12:32 AM IST

ಶಿಕ್ಷಣದ ಮೂಲಕ ಮೋದಿ ಕನಸಿನ ವಿಕಸಿತ ಭಾರತ ನಿರ್ಮಿಸೋಣ: ಯಶ್ಪಾಲ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರು. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ‌ಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಪಾಲಿಗೆ ಸದಾ ಹೆಮ್ಮೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಕನಸನ್ನು ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಮೂಲಕ ನನಸಾಗಿಸುವ ಸಂಕಲ್ಪ ನಾವೆಲ್ಲರೂ ಮಾಡೋಣ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಅವರು ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರು. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ‌ಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಚಾಲನೆ ನೀಡಿ ಮಾತನಾಡಿದರು.ಈ ಸಂದರ್ಭ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ತೆಂಕನಿಡಿಯೂರು ಗ್ರಾಪಂ ಉಪಾಧ್ಯಕ್ಷ ಅರುಣ್ ಜತ್ತನ್, ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಮತ್ತು ಗಾಯತ್ರಿ, ತಾಪಂ ಮಾಜಿ ಸದಸ್ಯ ಶರತ್ ಬೈಲಕೆರೆ, ಗ್ರಾಪಂ ಸದಸ್ಯರಾದ ವಿನೋದ್ ಸುವರ್ಣ, ಸತೀಶ್ ಪೂಜಾರಿ, ಮಾಲಿನಿ, ಪುಷ್ಪ ಉಮೇಶ್, ಪಕ್ಷದ ಪ್ರಮುಖರಾದ ವಿಜಯ ಪ್ರಕಾಶ್, ಕಿರಣ್ ಪಿಂಟೋ, ಕಾವೇರಿ ಗಾಣಿಗ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.