ಭಾರತದ ಎಲ್ಲ ನಾಗರೀಕರು ಅನುಸರಿಸಬೇಕಾದ ಮೂಲಭೂತ ನಿಯಮ ಮತ್ತು ಹಕ್ಕುಗಳ ರಚನೆಗೆ ರಚಿಸಲಾಗಿರುವ ಸಂವಿಧಾನದಿಂದ ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಇಲ್ಲಿ ಕಾನೂನುಗಳು ಎಲ್ಲರಿಗೂ ಸಮಾನವಾಗಿವೆ ಎಂದು ಉಪವಿಭಾಗಾಧಿಕಾರಿ ಸಪ್ತಶ್ರೀ ಬಿ.ಕೆ. ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಭಾರತದ ಎಲ್ಲ ನಾಗರೀಕರು ಅನುಸರಿಸಬೇಕಾದ ಮೂಲಭೂತ ನಿಯಮ ಮತ್ತು ಹಕ್ಕುಗಳ ರಚನೆಗೆ ರಚಿಸಲಾಗಿರುವ ಸಂವಿಧಾನದಿಂದ ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಇಲ್ಲಿ ಕಾನೂನುಗಳು ಎಲ್ಲರಿಗೂ ಸಮಾನವಾಗಿವೆ ಎಂದು ಉಪವಿಭಾಗಾಧಿಕಾರಿ ಸಪ್ತಶ್ರೀ ಬಿ.ಕೆ. ತಿಳಿಸಿದರು.

ನಗರದ ಕಲ್ಪತರು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ೭೭ನೆ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಇಂದು ದೇಶ ಶಿಕ್ಷಣ, ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಆಧ್ಯಾತ್ಮ, ಸಂಸ್ಕೃತಿ, ಆರೋಗ್ಯ, ಧರ್ಮ, ರಕ್ಷಣೆ, ರಾಜಕೀಯ ಕ್ಷೇತ್ರಗಳಲ್ಲಿ ಅತ್ಯದ್ಭುತ ಸಾಧನೆ ಮಾಡಿರುವುದರಿಂದ ಜಗತ್ತೆ ನಮ್ಮ ದೇಶದ ಕಡೆಗೆ ನೋಡುವಂತಾಗಿದೆ. ನಮ್ಮ ದೇಶದಲ್ಲಿ ವೇಷ ಬೇರೆ, ಭಾಷೆ ಬೇರೆ ಆದರೂ ಭಾರತ ಒಂದೇ ಆಗಿದ್ದು ಎಲ್ಲರೂ ಒಗ್ಗಟ್ಟಿನಿಂದ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಡೋಣ ಎಂದು ತಿಳಿಸಿದರು.ಶಾಸಕ ಕೆ.ಷಡಕ್ಷರಿ ಮಾತನಾಡಿ ಸಂವಿಧಾನವನ್ನು ಪ್ರತಿಯೊಬ್ಬ ಪ್ರಜೆಯೂ ಗೌರವಪೂರ್ವಕವಾಗಿ ಮನೆ, ಮನದಲ್ಲಿಯೂ ಅನುಸರಿಸಬೇಕಾಗಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಮೋಹನ್‌ಕುಮಾರ್, ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಸಹಾಯಕ ಪೊಲೀಸ್ ಅಧೀಕ್ಷಕ ಯಶ್‌ಕುಮಾರ್ ಶರ್ಮ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅಧಿಕಾರಿಗಳು, ಸಂಘ-ಸಂಸ್ಥೆಗಳು, ಗಣ್ಯರು. ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.