ಸಾರಾಂಶ
ಚಳ್ಳಕೆರೆ ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿಗಳ ಜಯಂತಿ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶಾಸಕ ಟಿ.ರಘುಮೂರ್ತಿ ಹೇಳಿಕೆಕನ್ನಡಪ್ರಭ ವಾರ್ತೆ ಚಳ್ಳಕೆರೆ
ಸಮಾಜದ ಎಲ್ಲಾ ವರ್ಗದ ಜನರಲ್ಲಿ ಧಾರ್ಮಿಙಕ ಜಾಗೃತಿ ಮೂಡಿಸುವಲ್ಲಿ ಅನೇಕ ಮಹರ್ಷಿಗಳು ತಮ್ಮದೆಯಾದ ಸೇವೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯೂ ಸಮಾಜಕ್ಕಾಗಿ ಸೇವೆ ಮಾಡಬೇಕೆಂಬ ಸಂಕಲ್ಪ ಮಾಡಿಸುವಲ್ಲಿ ಸವಿತಾ ಮಹರ್ಷಿಗಳು ಎಲ್ಲರಿಗೂ ಸ್ಪೂರ್ತಿಯಾಗುತ್ತಾರೆ. ಸವಿತಾ ಮಹರ್ಷಿಗಳ ಆದರ್ಶ ಪಾಲನೆಗೆ ನಾವೆಲ್ಲರೂ ಒತ್ತು ನೀಡಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.ಬುಧವಾರ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಸವಿತಾಮಹರ್ಷಿಗಳ ಜಯಂತಿ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸಮಾಜದಲ್ಲಿ ಆಳಾವಾಗಿ ಬೇರೂರಿದ್ದ ಸಂಕುಚಿತ ಭಾವನೆಗಳನ್ನು ಹೋಗಲಾಡಿಸಲು ಸವಿತಾ ಮಹರ್ಷಿಗಳು ತಮ್ಮದೇಯಾದ ವಿಶೇಷ ಕಾರ್ಯಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ. ನಾಡಿನ ಸವಿತಾ ಸಮಾಜದ ದೈವವಾದ ಸವಿತಾ ಮಹರ್ಷಿಗಳ ಜಯಂತಿ ಆಚರಣೆ ಸರ್ಕಾರ ಅನುವು ಮಾಡಿಕೊಟ್ಟಿರುವುದು ಸಂತಸ ವಿಷಯ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಶಿರಸ್ತೇದಾರ್ ಸದಾಶಿವಪ್ಪ, ಸರ್ಕಾರ ಅನೇಕ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳನ್ನು ಆಚರಣೆ ಮಾಡುವ ಮೂಲಕ ಅವರು ನಾಡಿಗೆ ಸಲ್ಲಿಸಿದ ಸೇವೆಯ ಬಗ್ಗೆ ನೆನಪಿಸಿಕೊಳ್ಳುವಂತಹ ಅವಕಾಶವನ್ನು ಎಲ್ಲರಿಗೂ ಮಾಡಿಕೊಟ್ಟಿದೆ. ಸವಿತಾ ಮಹರ್ಷಿಗಳು ಸಹ ಧಾರ್ಮಿಕ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದವರು. ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುವಲ್ಲಿ ಅವರು ಯಶಸ್ವಿ ಹೆಜ್ಜೆ ಇಟ್ಟಿದ್ದರು ಎಂದರು.
ಇಒ ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಮಭರಮಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯ ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಸವಿತಾ ಸಮಾಜದ ಅಧ್ಯಕ್ಷ ರಾಜು, ಮುಖಂಡರಾದ ಮಂಜುನಾಥ, ನಾಗರಾಜ, ಓಬಣ್ಣ, ಲಕ್ಷ್ಮಣ ಉಪಸ್ಥಿತರಿದ್ದರು.