ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಮಾಜಿ ಸಿಎಂ ಎಚ್‌ಡಿಕೆ ಗೆಲ್ಲಿಸೋಣ

| Published : Apr 01 2024, 12:45 AM IST

ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಮಾಜಿ ಸಿಎಂ ಎಚ್‌ಡಿಕೆ ಗೆಲ್ಲಿಸೋಣ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ-ಜೆಡಿಎಸ್ ಮೈತ್ರಿ ಹಾಲು ಜೇನು ಇದ್ದ ರೀತಿ. ಎರಡು ಪಕ್ಷದ ಕಾರ್ಯಕರ್ತರು ಒಂದು ಕುಟುಂಬವಿದ್ದಂತೆ. ಕುಮಾರಸ್ವಾಮಿಯವರ ಗೆಲುವಿಗೆ ಶ್ರಮ ವಹಿಸಿ ಕೆಲಸ ಮಾಡಬೇಕು. ಸ್ಥಳೀಯರನ್ನು ಅಭ್ಯರ್ಥಿ ಮಾಡಬೇಕು ಎಂದು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ನಾಯಕರ ಒತ್ತಾಯದ ಮೇರೆಗೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದಾರೆ. ಏ.4 ರಂದು ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿ ನಂತರ ಬಹಿರಂಗ ಸಭೆ ಉದ್ದೇಶಿಸಿ ಎರಡು ಪಕ್ಷದ ನಾಯಕರು ಮಾತನಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಬಿಜೆಪಿ ಮತ್ತು ಜೆಡಿಎಸ್ ಪಕ್ಷವು ಹಾಲು ಜೇನು ಇದ್ದಂತೆ, ಹಳೆಯ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮಿಸೋಣ ಎಂದು ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಮನವಿ ಮಾಡಿದರು.

ತಾಲೂಕಿನ ಹುಲಿವಾನ ಗ್ರಾಮದ ರೈಸ್‌ಮಿಲ್‌ ಆವರಣದಲ್ಲಿ ನಡೆದ ಕೆರಗೋಡು ಹೋಬಳಿ ಹಾಗೂ ಹನಗನಹಳ್ಳಿ ಗೇಟ್ ಜಿನ್ನಾಗರದಮ್ಮ ದೇವಾಲಯದ ಆವರಣದಲ್ಲಿ ಭಾನುವಾರ ನಡೆದ ಬಸರಾಳು ಹೋಬಳಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಹಾಲು ಜೇನು ಇದ್ದ ರೀತಿ. ಎರಡು ಪಕ್ಷದ ಕಾರ್ಯಕರ್ತರು ಒಂದು ಕುಟುಂಬವಿದ್ದಂತೆ. ಕುಮಾರಸ್ವಾಮಿಯವರ ಗೆಲುವಿಗೆ ಶ್ರಮ ವಹಿಸಿ ಕೆಲಸ ಮಾಡಬೇಕು. ಸ್ಥಳೀಯರನ್ನು ಅಭ್ಯರ್ಥಿ ಮಾಡಬೇಕು ಎಂದು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ ನಾಯಕರ ಒತ್ತಾಯದ ಮೇರೆಗೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದಾರೆ ಎಂದು ನುಡಿದರು.

ಏ.4 ರಂದು ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿ ನಂತರ ಬಹಿರಂಗ ಸಭೆ ಉದ್ದೇಶಿಸಿ ಎರಡು ಪಕ್ಷದ ನಾಯಕರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬೂತ್ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಅವರ ಮನಸ್ಸನ್ನು ನೋಯಿಸಬಾರದು ಎಂದು ಮನವಿ ಮಾಡಿದರು.

ಜೆಡಿಎಸ್ ಕಾಂಗ್ರೆಸ್ ಮೈತ್ರಿಯಿಂದ ಕುಮಾರಸ್ವಾಮಿಯವರಿಗೆ ಕಷ್ಟ ಕೊಟ್ಟು 14 ತಿಂಗಳಿಗೆ ತಮ್ಮ ಸರ್ಕಾರವನ್ನು ವಿಸರ್ಜಿಸಿ ಹೊರ ಬಂದರು. ಅದರಿಂದ ಹಳ್ಳಿಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಲು ಸಾಧ್ಯವಿದೆ ಎಂದರು.

ಜೆಡಿಎಸ್ ಮುಖಂಡ ಕೆ.ಎಸ್.ವಿಜಯ್ ಆನಂದ್ ಮಾತನಾಡಿ, ಮೂರನೇ ಬಾರಿಗೆ ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿ ಆಗುವ ಜೊತೆಗೆ ಕೇಂದ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮಂತ್ರಿ ಆಗುವುದು ಶತಸಿದ್ಧ. ಈಗಾಗಲೇ ಬೆಂಗಳೂರು ಹಾಗೂ ಮಂಡ್ಯದಲ್ಲಿ ಸಮನ್ವಯ ಸಮಿತಿ ಸಭೆಗಳು ನಡೆದಿದ್ದು ಈಗ ಹೋಬಳಿ ಮಟ್ಟದಲ್ಲಿ ನೆಡೆಯುತ್ತಿದೆ ಎರಡು ಪಕ್ಷದ ಕಾರ್ಯಕರ್ತರು ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಕುಮಾರಸ್ವಾಮಿ ಅವರನ್ನು ಹೆಚ್ಚು ಅಂತರದಿಂದ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್, ಮುಖಂಡರಾದ ವಸಂತರಾಜ್, ಎಂ.ಜಿ.ತಿಮ್ಮೇಗೌಡ, ಸಿದ್ದರಾಮೇಗೌಡ, ಅಶೋಕ್ ಜಯರಾಮ್, ಭೀಮೇಶ್, ಶಿವಕುಮಾರ್ ಆರಾಧ್ಯ, ಮನು, ಬೂದನೂರು ಸ್ವಾಮಿ, ಮಹೇಶ್, ಆನಂದ್, ಪುಟ್ಟಸ್ವಾಮಿ ಭಾಗವಹಿಸಿದ್ದರು.