ಗ್ಯಾರಂಟಿ ಯೋಜನೆಗಳ ಅರಿವು ಮೂಡಿಸೋಣ

| Published : Mar 19 2024, 12:47 AM IST

ಸಾರಾಂಶ

ರಾಜ್ಯದಲ್ಲಿರುವ ಎಲ್ಲ ವರ್ಗಗಳಿಗೂ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳ ಸುಧಾರಣೆಗಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುತ್ತೆ ಎಂದು ಬಯಪ ಅಧ್ಯಕ್ಷ ವಿ.ಶಾಂತ ಕುಮಾರ್ ಅಭಿಪ್ರಾಯಪಟ್ಟರು.

ಕುಂದಾಣ: ರಾಜ್ಯದಲ್ಲಿರುವ ಎಲ್ಲ ವರ್ಗಗಳಿಗೂ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳ ಸುಧಾರಣೆಗಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುತ್ತೆ ಎಂದು ಬಯಪ ಅಧ್ಯಕ್ಷ ವಿ.ಶಾಂತ ಕುಮಾರ್ ಅಭಿಪ್ರಾಯಪಟ್ಟರು.

ಹೋಬಳಿಯ ಕೊಯಿರಾ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಬಿಜೆಪಿಯ ವಿರೋಧಾಭಾಸದ ನಡೆಗಳು ದೇಶದ ಜನತೆಯ ನೆಮ್ಮದಿ ಹಾಳು ಮಾಡಿದ್ದು, ಈ ಬಾರಿ ಕಾಂಗ್ರೆಸ್ ಮಿತ್ರ ಪಕ್ಷಗಳೇ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಪ್ರಸನ್ನ ಕುಮಾರ್ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಎಲ್ಲ ಮುಖಂಡರಿಗೂ ಸರ್ಕಾರದಲ್ಲಿ ಭಾಗಿಯಾಗುವ ಅವಕಾಶ ನೀಡಲಾಗಿದೆ. ಇದು ಕಾರ್ಯಕರ್ತರಲ್ಲಿ ಇನ್ನಷ್ಟು ಕೆಲಸ ಮಾಡುವ ಉತ್ಸಾಹ ಹೆಚ್ಚಿಸಿದ್ದು ಚುನಾವಣೆ ಫಲಿತಾಂಶದಲ್ಲಿ ಅದು ಗೋಚರಿಸುತ್ತದೆ. ಅಧಿಕಾರ ವಿಕೇಂದ್ರೀಕರಣದಲ್ಲಿ ಕಾಂಗ್ರೆಸ್ ಸರ್ಕಾರ ವಿಶ್ವಾಸ ಹೊಂದಿದ್ದು, ಸ್ಥಳೀಯ ನಾಯಕತ್ವವನ್ನು ಬೆಳೆಸುವ ವೇದಿಕೆ ನಿರ್ಮಿಸಿದೆ. ಇದನ್ನು ಉಪಯೋಗಿಸಿಕೊಂಡು ಎಲ್ಲ ಸಮುದಾಯಗಳಿಗೂ ರಾಜ್ಯದ ಎಲ್ಲ ಯೋಜನೆಗಳ ಕುರಿತು ಅರಿವು ಮೂಡಿಸುವುದು, ಫಲಾನುಭವಿಗಳನ್ನಾಗಿ ಮಾಡುವುದು ಸೇರಿದಂತೆ ಸರ್ಕಾರದ ಸಾಧನೆ ತಿಳಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಾಜಣ್ಣ, ತಾಪಂ ಮಾಜಿ ಸದಸ್ಯ ಮಂಜುನಾಥ್, ಸಂಪಂಗಿ ಗೌಡ, ಮುನೇಗೌಡ, ರಾಮಚಂದ್ರಪ್ಪ, ಶ್ರೀನಿವಾಸ್, ಕೆಂಪಣ್ಣ, ಮುನಿರಾಜು, ಮಮತಾ ಶಿವಾಜಿ ಗೌಡ, ಸೇರಿದಂತೆ ಇತರರಿದ್ದರು. ಕುಂದಾಣ ಹೋಬಳಿಯ ಕೊಯಿರಾ ಗ್ರಾಮದಲ್ಲಿ ನೂತನ ಬಯಪ ಅಧ್ಯಕ್ಷ ಹಾಗೂ ಸದಸ್ಯರನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು. ಮುಖಂಡರು ಅಭಿನಂದಿಸಿದರು.