ಸಾರಾಂಶ
ಸಮಾಜವನ್ನು ಹಾಳು ಮಾಡುವ ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕಿದೆ ಎಂದು ಜನಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಹೇಳಿದರು.
ಕಡೂರು: ಸಮಾಜವನ್ನು ಹಾಳು ಮಾಡುವ ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕಿದೆ ಎಂದು ಜನಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಹೇಳಿದರು.
ತಾಲೂಕಿನ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ಸಮುದಾಯಭವನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ನವಜೀವನ ಸಮಿತಿಯಿಂದ ಗಾಂಧಿಜಯಂತಿ ಅಂಗವಾಗಿ ನಡೆದ ಗಾಂಧಿ ಸ್ಮೃತಿ ಮತ್ತು ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕರೂ ಸಾಮಾಜಿಕ ಹೊಣೆಗಾರಿಕೆ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮುಖ್ಯ ಆಶಯವಾಗಿದ್ದು, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದರು.
ದುಶ್ಚಟಗಳಿಂದ ದುಷ್ಟಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ. ಆಲ್ಕೋಹಾಲ್ ಸೇರಿದಂತೆ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಮಾತ್ರವಲ್ಲದೇ ಕೌಟುಂಬಿಕ ಸಂಬಂಧ ಮೇಲೂ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ. ಯುವ ಜನತೆ ಹೆಚ್ಚು ಮಾರುಹೋಗುತ್ತಿದ್ದು, ಇದರ ಬಗ್ಗೆ ಅರಿವು ಮೂಡಿಸಲು ಮುಂದಾಗಬೇಕಿದೆ ಎಂದರು.ಗ್ರಾಪಂ ಅಧ್ಯಕ್ಷೆ ಜ್ಯೋತಿಬಾಯಿ ಕಾರ್ಯಕ್ರಮ ಉದ್ಘಾಟಿಸಿದರು.
ಗ್ರಾಪಂ ಸದಸ್ಯ ರಾಜಾನಾಯ್ಕ್, ನವಜೀವನ ಸಮಿತಿ ಸದಸ್ಯ ಗಿರೀಶ್, ಹೆಡ್ ಕಾನ್ಸ್‌ಟೆಬಲ್ ಮಂಜುನಾಥಸ್ವಾಮಿ, ಮದ್ಯವರ್ಜನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವಿಶಂಕರ್, ಸೋಮಶೇಖರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಬೇಬಿ, ಗಂಗಾಧರ್, ಸುಬ್ರಹ್ಮಣ್ಯ ಮತ್ತಿತರಿದ್ದರು.