ಸಾರಾಂಶ
ತಂತ್ರ್ಯ ಹೋರಾಟಗಾರರು ಮತ್ತು ಯೋಧರ ತ್ಯಾಗ, ಬಲಿದಾನವನ್ನು ಪ್ರತಿನಿತ್ಯ ಸ್ಮರಿಸಬೇಕು ಎಂದು ಮರಿಯಾಲದ ಶ್ರೀ ಮುರುಘರಾಜೇಂದ್ರ ಸ್ವಾಮಿ ವಿದ್ಯಾಸಂಸ್ಥೆ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸ್ವತಂತ್ರ್ಯ ಹೋರಾಟಗಾರರು ಮತ್ತು ಯೋಧರ ತ್ಯಾಗ, ಬಲಿದಾನವನ್ನು ಪ್ರತಿನಿತ್ಯ ಸ್ಮರಿಸಬೇಕು ಎಂದು ಮರಿಯಾಲದ ಶ್ರೀ ಮುರುಘರಾಜೇಂದ್ರ ಸ್ವಾಮಿ ವಿದ್ಯಾಸಂಸ್ಥೆ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.ನಗರದ ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ ಆವರಣದಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಾದ ತಾವೆಲ್ಲರೂ ಹೋರಾಟಗಾರರ ಜೀವನ ಚರಿತ್ರೆಯನ್ನು ಅರಿತು ಅವರ ಮಾರ್ಗದಲ್ಲಿ ತಾವೆಲ್ಲರೂ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.ನಮಗೆ ಸ್ವಾತಂತ್ರ್ಯ ಸಿಕ್ಕ ಪರಿಣಾಮ ನಮ್ಮ ದೇಶ ವಿಶ್ವ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ. ನೀವು ಇಂತಹ ಅವಕಾಶಗಳನ್ನು ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಲು ಮಹಾನೀಯರ ಆದರ್ಶ ಪಾಲಿಸುವ ಮೂಲಕ ಯಾವುದೇ ಕೆಲಸವನ್ನು ಶ್ರದ್ದೆಯಿಂದ ಮಾಡಿದರೆ ಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದರು.ರೋಟರಿ ಸಿಲ್ಕ್‌ಸಿಟಿ ಅಧ್ಯಕ್ಷ ಎಚ್.ಬಿ. ಶಮಿತ್‌ಕುಮಾರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ರಾಷ್ಟ್ರಭಿಮಾನ ಬೆಳೆಸಿಕೊಳ್ಳುವ ಮೂಲಕ ದೇಶವನ್ನು ಉತ್ತಮ ರೀತಿಯಲ್ಲಿ ಕಟ್ಟುವ ಕೆಲಸಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಸಿಬಿಎಸ್‌ಇ ಹಾಗೂ ಪ್ರಾಥಮಿಕ ಶಾಲೆಯ ಮಕ್ಕಳು ದೇಶಭಕ್ತಿಗೀತೆ ನೃತ್ಯವನ್ನು ಪ್ರದರ್ಶಿಸಿದರು.ರೋಟರಿ ಸಿಲ್ಕ್ ಸಿಟಿ ಮಾಜಿ ಅಧ್ಯಕ್ಷರುಗಳಾದ ವಿಶ್ವಾಸ್, ಮುರುಘೇಂದ್ರಸ್ವಾಮಿ, ವೈ.ಅಕ್ಷಯ್, ಎಚ್.ಎಂ. ಅಜಯ್, ಮಣಿಕ್‌ಚಂದ್ ಸಿರ್ವಿ, ಪ್ರಧಾನ ಕಾರ್ಯದರ್ಶಿ ಸಂತೋಷ್‌ಕುಮಾರ್, ಮಣಿಕಂಠ, ಬಸವರಾಜು, ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಸವಣ್ಣ, ಮುಖ್ಯಶಿಕ್ಷಕ ಪ್ರಸನ್ನ, ಪ್ರಾಂಶುಪಾಲ ಮಹದೇವಸ್ವಾಮಿ, ಅಶೋಕ್, ಕೆ.ಸಿ. ಮಹೇಂದ್ರ ಇತರರು ಇದ್ದರು.