ಸಾರಾಂಶ
ಇಂದಿನ ವಾಸ್ತವಿಕ ಸಮಾಜದ ಬಹುದೊಡ್ಡ ಸಮಸ್ಯೆಯಾದ ಭ್ರಷ್ಟಾಚಾರವನ್ನು ಬುಡಸಮೇತ ಕೀಳಬೇಕಾಗಿದೆ. ಭ್ರಷ್ಟಾಚಾರ ಮುಕ್ತ ದೇಶಕ್ಕಾಗಿ ಸಂಕಲ್ಪ ಮಾಡೋಣ
ಅಮೀನಗಡ: ನಾಳಿನ ನಾಗರಿಕ ಸಮಾಜದ ಕೈಗನ್ನಡಿಯಾಗಿರುವ ಮಕ್ಕಳು ಭ್ರಷ್ಟಾಚಾರದ ಬಗ್ಗೆ ಜಾಗೃತಿ ಹೊಂದಬೇಕು. ರಾಷ್ಟ್ರದ ಅಭ್ಯುದಯಕ್ಕಾಗಿ ಭ್ರಷ್ಟಾಚಾರ ಕಿತ್ತೊಗೆಯಬೇಕು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಬಸವರಾಜ ಮುಕರ್ತಿಹಾಳ ಹೇಳಿದರು.
ಸಮೀಪದ ಸೂಳೇಬಾವಿ ಕಿತ್ತೂರು ರಾಣಿ ಚನ್ನಮ್ಮ ವಸತಿಶಾಲೆಯಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ವಾಸ್ತವಿಕ ಸಮಾಜದ ಬಹುದೊಡ್ಡ ಸಮಸ್ಯೆಯಾದ ಭ್ರಷ್ಟಾಚಾರವನ್ನು ಬುಡಸಮೇತ ಕೀಳಬೇಕಾಗಿದೆ. ಭ್ರಷ್ಟಾಚಾರ ಮುಕ್ತ ದೇಶಕ್ಕಾಗಿ ಸಂಕಲ್ಪ ಮಾಡೋಣ ಎಂದರು. ವಸತಿಶಾಲೆಯ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಇದೇ ವೇಳೆ ಸಪ್ತಾಹದ ಅಂಗವಾಗಿ ಭ್ರಷ್ಟಾಚಾರ ತಡೆಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಅದರಲ್ಲಿ ಭಾಗವಹಿಸುವ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿಧ್ಯಾರ್ಥಿನಿಯರಿಗೆ ಸೂಕ್ತ ಬಹುಮಾನ ನೀಡುವುದಾಗಿ ಘೋಷಿಸಿದರು. ವಸತಿ ಶಾಲೆ ಪ್ರಾಂಶುಪಾಲ ಎಂ.ಎಚ್.ಹಡಪದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟೀಮನಿ, ಲೋಕಾಯುಕ್ತ ಸಿಬ್ಬಂದಿ ಹನಮಂತ ಹಲಗತ್ತಿ, ಎನ್.ಎ.ಪೂಜಾರಿ, ಬಿ.ವಿ.ಪಾಟೀಲ ಇತರರಿದ್ದರು.