ಸಂವಿಧಾನದ ಮೂಲಕ ದೇಶದಲ್ಲಿ ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಅವಕಾಶ ಕಲ್ಪಿಸಲಾಗಿದೆ
ಕಾರಟಗಿ: ಸ್ವಾತಂತ್ರ್ಯ ನಂತರ ಭಾರತದಲ್ಲಿ ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಅವಕಾಶ ಸಂವಿಧಾನ ಕಲ್ಪಿಸಿದೆ. ಪ್ರತಿಯೊಬ್ಬರೂ ಈ ಶುಭ ದಿನದಂದು, ಸಂವಿಧಾನದ ನೈಜ ಆಶಯ ಅರಿಯೋಣ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ ಹೇಳಿದರು.
ಇಲ್ಲಿನ ತಾಪಂ ಆವರಣದಲ್ಲಿ 77 ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಭಾರತ ಸ್ವಾತಂತ್ರ್ಯ ಹೊಂದಿ ಇಂದು ಸುಸೂತ್ರವಾಗಿ ನಡೆಯಲು ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರವಾದುದ್ದು. 1950 ಜ. 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದ ದಿನವಾಗಿದೆ. ಸಂವಿಧಾನದ ಮೂಲಕ ದೇಶದಲ್ಲಿ ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಅವಕಾಶ ಕಲ್ಪಿಸಲಾಗಿದೆ ಎಂದರು.ರಾಯಣ್ಣ ಬಲಿದಾನ ದಿನ ಆಚರಣೆ: ತಾಪಂ ಕಚೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದ ಅಂಗವಾಗಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿದರು.
ಈ ವೇಳೆ ತಾಪಂ ಯೋಜನಾಧಿಕಾರಿ ರಾಘವೇಂದ್ರ, ಸಹಾಯಕ ನಿರ್ದೇಶಕಿ ವೈ.ವನಜಾ, ನಾಮನಿರ್ದೇಶಿತ ಕೆಡಿಪಿ ಸದಸ್ಯರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷರು, ಸದಸ್ಯರು, ತಾ.ಪಂ ವಿಷಯ ನಿರ್ವಾಹಕರು ಸೇರಿದಂತೆ, ನರೇಗಾ, ಎನ್.ಆರ್ ಎಲ್.ಎಂ ತಾಪಂ ಸಿಬ್ಬಂದಿ ಇದ್ದರು.