ಸಾರಾಂಶ
ಚನ್ನಪಟ್ಟಣ: ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಸಾಕಾರಗೊಳಿಸಿದ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಮನೆ ಮಗ. ಕ್ಷೇತ್ರದ ಅಭಿವೃದ್ಧಿಯನ್ನೇ ಗುರಿಯಾಗಿಟ್ಟುಕೊಂಡಿರುವ ಅವರನ್ನು ಮತದಾರರು ಆಶೀರ್ವಾದ ಮಾಡಬೇಕು ಎಂದು ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಯರೇಹಳ್ಳಿ ಮಂಜು ಮನವಿ ಮಾಡಿದರು.
ಮಳೂರು ಜಿಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಪ್ರಚಾರ ಮಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಶಿವಕುಮಾರ್ ಅವರೇ ನೀರಾವರಿ ಸಚಿವರಾಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಯೋಗೇಶ್ವರ್ ಗೆಲವು ಸಾಧಿಸಿದರೆ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳಲು ಸಹಕಾರಿಯಾಗಲಿದೆ. ಇದನ್ನು ಮತದಾರರು ಅರಿತುಕೊಳ್ಳಬೇಕು ಎಂದರು.ಎರಡು ಬಾರಿ ಸೋತು ಅನ್ಯಾಯವಾಗಿದೆ ಎಂದು ನಿಖಿಲ್ ಹೇಳುತಿದ್ದಾರೆ. ಆದರೆ, ಚನ್ನಪಟ್ಟಣದ ಅಭಿವೃದ್ಧಿಗೆ ನಿಂತ ಯೋಗೇಶ್ವರ್ ಅವರಿಗೆ ಎರಡು ಬಾರಿ ಸೋಲಾಗಿ ಅನ್ಯಾಯಕ್ಕೊಳಗಾಗಿದ್ದಾರೆ. ಈಗ ಗೆಲುವು ಸಾಧಿಸಿದರೆ ಮೂರುವರೆ ವರ್ಷಗಳ ಕಾಲ ಚನ್ನಪಟ್ಟಣ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿದ್ದಾರೆ. ಮತದಾರರು ಸ್ಥಳೀಯರನ್ನು ಗೆಲ್ಲಿಸಬೇಕೆ, ಕ್ಷೇತ್ರ ಬಿಟ್ಟು ಹೋದ ಹೊರಗಿನವರನ್ನು ಗೆಲ್ಲಿಸಬೇಕೆ ಎಂಬುದಕ್ಕೆ ಉತ್ತರ ನೀಡುತ್ತಾರೆ ಎಂದು ಹೇಳಿದರು.
ಕುಮಾರಸ್ವಾಮಿ ರಾಮನಗರದಲ್ಲಿ ಗೆದ್ದಾಗಲೂ ಅಲ್ಲಿಗೆ ಹೋಗಿಲ್ಲ, ಚನ್ನಪಟ್ಟಣದಲ್ಲೂ ಮತದಾರರ ಸಮಸ್ಯೆ ಕೇಳಿಲ್ಲ. ಅಧಿಕಾರದ ಆಸೆಯಿಂದ ಕ್ಷೇತ್ರಾಂತರ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಇನ್ನು ಅವರ ಪುತ್ರ ನಿಖಿಲ್ ಕೂಡ ಕ್ಷೇತ್ರದಿಂದ ಕ್ಷೇತ್ರಕ್ಕೆ ಜಿಗಿಯುತ್ತಲೇ ಇದ್ದಾರೆ. ಇಂತಹವರಿಂದ ಎಂತಹ ಅಭಿವೃದ್ಧಿ ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.ಚನ್ನಪಟ್ಟಣದಿಂದ ಗೆದ್ದು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಕುಮಾರಸ್ವಾಮಿ ಕ್ಷೇತ್ರದ ಜನರ ಸಮಸ್ಯೆ ಆಲಿಸಲಿಲ್ಲ. ನೀರಾವರಿ ಯೋಜನೆ ಇರಲಿ ರಸ್ತೆ, ಚರಂಡಿ, ಬೀದಿ ದೀಪದಂತಹ ಮೂಲ ಸೌಕರ್ಯ ಕಲ್ಪಿಸಲು ಅವರಿಂದ ಸಾಧ್ಯವಾಗಿಲ್ಲ. ಕೇವಲ ಚುನಾವಣೆಗಳು ಬಂದಾಗ ಮಾತ್ರ ಗ್ರಾಮಗಳಿಗೆ ಬರುವ ಅವರನ್ನು ಮತದಾರರು ನಂಬಬಾರದು. ಕ್ಷೇತ್ರದ ಸ್ವಾಭಿಮಾನಿ ಮತದಾರರು ಆಲೋಚನೆ ಮಾಡಿ ಮನೆ ಮಗ ಯೋಗೇಶ್ವರ್ ಅವರಿಗೆ ಮತ ಚಲಾಯಿಸಬೇಕು ಎಂದು ಮಂಜು ಮನವಿ ಮಾಡಿದರು.
ಈ ವೇಳೆ ತಾಪಂ ಮಾಜಿ ಅಧ್ಯಕ್ಷ ಜಗದೀಶ್, ಮುಖಂಡರು ಹಾಜರಿದ್ದರು.10ಕೆಆರ್ ಎಂಎನ್ 8.ಜೆಪಿಜಿ
ಚನ್ನಪಟ್ಟಣ ಕ್ಷೇತ್ರದ ಮಳೂರು ಜಿಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಯರೇಹಳ್ಳಿ ಮಂಜು ಹಾಗೂ ಮುಖಂಡರು ಪ್ರಚಾರ ನಡೆಸಿದರು.-------------------------