ಪಕ್ಷ ಬಲವರ್ಧನೆಗೆ ಪಾದರಸದಂತೆ ಕೆಲಸ ಮಾಡೋಣ: ಚಂದ್ರಶೇಖರ್

| Published : Jul 13 2024, 01:40 AM IST

ಸಾರಾಂಶ

ಪಕ್ಷದ ಬಲವರ್ಧನೆಗಾಗಿ ಬೂತ್‌ ಮಟ್ಟದಿಂದ ನಾವೆಲ್ಲರೂ ಪಾದರಸದಂತೆ ಕರ್ತವ್ಯ ನಿರ್ವಹಿಸೋಣ ಎಂದು ಬಿಜೆಪಿಯ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್ ಯಾಳಗಿ ವಿವಿಧ ಸಮಿತಿ ಪದಾಧಿಕಾರಿಗಳಿಗೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಹಾಪುರ

ಪಕ್ಷದ ಬಲವರ್ಧನೆಗಾಗಿ ಬೂತ್‌ ಮಟ್ಟದಿಂದ ನಾವೆಲ್ಲರೂ ಪಾದರಸದಂತೆ ಕರ್ತವ್ಯ ನಿರ್ವಹಿಸೋಣ ಎಂದು ಬಿಜೆಪಿಯ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್ ಯಾಳಗಿ ವಿವಿಧ ಸಮಿತಿ ಪದಾಧಿಕಾರಿಗಳಿಗೆ ತಿಳಿಸಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಗರ ಮಂಡಲ ಹಾಗೂ ವಿವಿಧ ಮೋರ್ಚಾಗಳ‌ ನೂತನ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಸದಾ ಸಂಘಟನೆಯನ್ನೇ ನಂಬಿಕೊಂಡು ಬಂದ ಪಕ್ಷವಾಗಿದ್ದು, ಕಾರ್ಯಕರ್ತರೇ ಪಕ್ಷದ ಜೀವಾಳ ಎಂದರು.

ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ, ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಸಂಘಟನೆಯಲ್ಲಿ ತೊಡಗಿಕೊಂಡು ಮತ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು. ಬೂತ್‌ಮಟ್ಟದಲ್ಲಿ 20 ರಿಂದ 25 ಸದಸ್ಯರ ತಂಡದೊಂದಿಗೆ ಪ್ರತಿ ಮನೆಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸೋಣ ಎಂದರು.

ನೂತನವಾಗಿ ಜವಬ್ದಾರಿ ವಹಿಸಿಕೊಂಡ ಎಲ್ಲ ಪದಾಧಿಕಾರಿಗಳು ಪಕ್ಷದ ತತ್ವ ಸಿದ್ದಾಂತವನ್ನು ಅಳವಡಿಸಿಕೊಂಡು ಕಾರ್ಯೋನ್ಮುಖರಾಗಬೇಕು. ಪಕ್ಷದ ಘನತೆಗೆ ಧಕ್ಕೆ ಬರದ ಹಾಗೆ ನಡೆದುಕೊಳ್ಳಬೇಕು. ಪಕ್ಷ ವಿರೋಧಿ ಚಟುವಟಿಕೆ ಕಂಡು ಬಂದಲ್ಲಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ. ನಿಮ್ಮ ನಿಷ್ಠೆ ಪ್ರಮಾಣಿಕತೆ ಮೇಲೆ ಪಕ್ಷದ ಘನತೆ ಅಡಗಿದೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಮೋರ್ಚಾದ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.