ಸಾರಾಂಶ
ತರೀಕೆರೆ, ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗೋಣ ಎಂದು ಶಾಸಕ ಜಿ.ಎಚ್,ಶ್ರೀನಿವಾಸ್ ಹೇಳಿದ್ದಾರೆ.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ರಂಗನೇಹಳ್ಳಿಯಲ್ಲಿ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಲೋಕಸಭಾ ಪಕ್ಷದ ಅಭ್ಯರ್ಥಿ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಉದ್ಘಾಟಿಸಿ ಮಾತನಾಡಿ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಿದೆ ಎಂದು ಹೇಳಿದರು.
ರಂಗೇನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ
ಕನ್ನಡಪ್ರಭ ವಾರ್ತೆ, ತರೀಕೆರೆಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗೋಣ ಎಂದು ಶಾಸಕ ಜಿ.ಎಚ್,ಶ್ರೀನಿವಾಸ್ ಹೇಳಿದ್ದಾರೆ.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ರಂಗನೇಹಳ್ಳಿಯಲ್ಲಿ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಲೋಕಸಭಾ ಪಕ್ಷದ ಅಭ್ಯರ್ಥಿ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಉದ್ಘಾಟಿಸಿ ಮಾತನಾಡಿ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷದ ಎಚ್.ಯು. ಫಾರುಕ್ ಮಾತನಾಡಿ ಲೋಕಸಭಾ ಚುನಾವಣೆ ಭಾವನಾತ್ಮಕ ವಿಷಯದಲ್ಲಿ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಹೆಚ್ಚಿನ ಆತ್ಮವಿಶ್ವಾಸ, ಭರವಸೆಗಳ ಮತ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ತಿಳಿಸಿದರು.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್ ಮಾತನಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಸೋಲಿಗೆ ಪಕ್ಷದ ಎಲ್ಲ ಮುಖಂಡರು ಆತ್ಮಾವಲೋಕನ ಮಾಡಿ ಕೊಳ್ಳಬೇಕು, ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಪಕ್ಷ ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಪರಿಣಾಮಕಾರಿ ಯಾಗಿ ಮಾಡುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಕೆಪಿಸಿಸಿ ಸದಸ್ಯ ಎಚ್.ವಿಶ್ವನಾಥ್ ಮಾತನಾಡಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.ಹಿರಿಯ ಕಾಂಗ್ರೆಸ್ ಮುಖಂಡರಾದ ರಂಗಪ್ಪ, ರವಿಕಿಶೋರ್, ಅನ್ಬು, ನಂದಕುಮಾರ್, ಅರವಿಂದ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಲ್ ಟಿ ಹೇಮಣ್ಣ, ಫಣಿರಾಜ್ ಜೈನ್,ಸಿರಾಜ್ , ಬ್ಲಾಕ್ ಕಾಂಗ್ರೆಸ್ ಸಮಿತಿ (ಎಸ್.ಸಿ) ಅಧ್ಯಕ್ಷ ಗೌರೀಶ್, ಪರಮೇಶ್ ಎಲ್.ಎ. ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಆನಂದ್ ಕಾರ್ಯಕ್ರಮ ನಿರೂಪಿಸಿದರು. ಹನೀಫ್ ವಂದಿಸಿದರು.26ಕೆಟಿಆರ್.ಕೆ.4ಃ
ತರೀಕೆರೆ ಸಮೀಪದ ರಂಗೇನಹಳ್ಳಿಯಲ್ಲಿ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ಉದ್ಘಾಟಿಸಿದರು. ಕೆಪಿಸಿಸಿ ಸದಸ್ಯ ಎಚ್.ವಿಶ್ವನಾಥ್, ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್ , ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಲ್.ಟಿ. ಹೇಮಣ್ಣ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್, ಎಲ್.ಎ.ಅನ್ಪು, ಎ.ಜಿ.ಸಿರಾಜ್ ಮತ್ತಿತರರು ಇದ್ದರು.