ತರೀಕೆರೆಪತ್ರಕರ್ತರೆಲ್ಲರೂ ಒಗ್ಗಟ್ಟಾಗಿ ಇರೋಣ ಮತ್ತು ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಹೇಳಿದರು.

ಪತ್ರಕರ್ತರ ಸಂಘದ ಅನಿಲ್ ಆನಂದ್ ಸಲಹೆ । ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭಕನ್ನಡಪ್ರಭ ವಾರ್ತೆ ತರೀಕೆರೆ

ಪತ್ರಕರ್ತರೆಲ್ಲರೂ ಒಗ್ಗಟ್ಟಾಗಿ ಇರೋಣ ಮತ್ತು ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಹೇಳಿದರು.

ತರೀಕೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಮಾತನಾಡಿ ಸಂಘದ ಸದಸ್ಯರಿಗೆ ಸಿಗಬೇಕಾದ ಸೌಲಭ್ಯ ಮತ್ತು ಹಿತ ಕಾಪಾಡಲು ಎಲ್ಲರೂ ಬದ್ಧರಾಗೋಣ. ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ ಮಾದರಿ ಸಂಘಟನೆ ಕಟ್ಟೋಣ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಕಾರ್ಯದರ್ಶಿ ಚೇತನ್ ಮಾತನಾಡಿ ಎಲ್ಲಾ ಸದಸ್ಯ್ರರು ಸಭೆಯಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ. ಎಲರೂ ಒಗ್ಗಟ್ಟಾಗಿ ಸಂಘದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.

ಹಿರಿಯ ಪತ್ರಕರ್ತ ಎಸ್.ಸುರೇಶ್ ಚಂದ್ರ ಮಾತನಾಡಿ, ಸಂಘದಿಂದ ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸೋಣ, ತರೀಕೆರೆ ತಾಲೂಕು ಸಂಘದಿಂದ ಪತ್ರಕರ್ತರ ಸಹಕಾರ ಸಂಘ ಸ್ಥಾಪಿಸಲಾಗುತ್ತಿದ್ದು ಸಹಕಾರ ಸಂಘಕ್ಕೆ ಎಲ್ಲರೂ ಸಹಕರಿಸ ಬೇಕು. ಸಹಕಾರ ಸಂಘದಿಂದ ಸಂಘದ ಸದಸ್ಯರಿಗೆ ನಿವೇಶನ ಒದಗಿಸಿ ಪತ್ರಕರ್ತರ ಕಾಲೋನಿ ನಿರ್ಮಿಸಲು ಪ್ರಯತ್ನಿಸಲಾಗುವುದು ಎಂದರು.

ಪುರಸಭೆ ಸದಸ್ಯ ಮತ್ತು ಪತ್ರಕರ್ತ ಟಿ.ದಾದಾಪೀರ್ ಮಾತನಾಡಿ, ಪತ್ರಕರ್ತರು ಹಲವು ಸಮಸ್ಯೆ ಮತ್ತು ಸವಾಲುಗಳ ಮಧ್ಯೆಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಅದರೂ ಪತ್ರಕರ್ತರು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಉಪಾಧ್ಯಕ್ಷ ಬಿ.ಎನ್.ನಾಗರಾಜ್, ಸಂಘದ ನಿಕಟಪೂರ್ವ ಅಧ್ಯಕ್ಷ ನಾಗೇಂದ್ರಪ್ಪ, ಪತ್ರಕರ್ತರಾದ ಎಸ್.ಕೆ.ಸ್ವಾಮಿ, ಕೆ.ನಾಗರಾಜು, ಸಿ.ಗುರುಮೂರ್ತಿ, ಜಿ.ಟಿ.ರಮೇಶ್, ಎಸ್.ಎನ್.ಸಿದ್ರಾಮಪ್ಪ, ಶಶಿಧರ್ ದೋರನಾಳು, ಮುಖಂಡರಾದ ಬಾಲರಾಜ್ ಮತ್ತಿತರರು ಮಾತನಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ತರೀಕೆರೆ ತಾಲೂಕು ಸಂಘಕ್ಕೆ .ಎನ್.ಸಿದ್ರಾಮಪ್ಪ (ಅಧ್ಯಕ್ಷ) ಶಶಿಧರ್ ದೋರನಾಳು (ಉಪಾಧ್ಯಕ್ಷ) ಗುರುಮೂರ್ತಿ (ಪ್ರಧಾನ ಕಾರ್ಯದರ್ಶಿ), ಎಂ.ಚಂದ್ರು (ಸಂಘಟನಾ ಕಾರ್ಯದರ್ಶಿ) ಎಸ್.ಕೆ.ಸ್ವಾಮಿ (ಖಚಾಂಚಿ) ಅವರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಮತ್ತು ತರೀಕೆರೆ ತಾಲೂಕು ಸಂಘದ ಸದಸ್ಯರು ಭಾಗವಹಿಸಿದ್ದರು. 19ಕೆಟಿಆರ್.ಕೆ.1..

ತರೀಕೆರೆಯಲ್ಲಿ ಕಾರ್ಯನಿರತ ಪತ್ರಕರ್ತರ ತಾಲೂಕು ಸಂಘದಿಂದ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಅನಿಲ್ ಆನಂದ್, ಸದಸ್ಯರು ಭಾಗವಹಿಸಿದ್ದರು.