ಸಾರಾಂಶ
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆಗೆ ಮುನ್ನ ಸಿಬಿಐ ತನಿಖೆಗೆ ಪ್ರಕರಣ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದರು.
ಶಿರಸಿ: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆಗೆ ಮುನ್ನ ಸಿಬಿಐ ತನಿಖೆಗೆ ಪ್ರಕರಣ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸ್ನೇಹಮಯಿ ಕೃಷ್ಣ ಅವರು ಬಯಲಿಗೆ ಎಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ನ ಶಾಸಕರು ಸದನದ ಒಳಗಡೆ ಹಾಗೂ ಸದನದ ಹೊರಗಡೆ ಹೋರಾಟ ಮಾಡುತ್ತ ಬಂದಿದ್ದಾರೆ. ಮೈಸೂರು ಚಲೋ ಪಾದಯಾತ್ರೆಯ ಮೂಲಕ ಜನಜಾಗೃತಿ ಮೂಡಿಸುವಲ್ಲಿ ನಮ್ಮ ರಾಜ್ಯದ ನಾಯಕತ್ವ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.ಮುಡಾ ಹಗರಣ ನಿನ್ನೆ ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯ (ಇಡಿ) ₹೩೦೦ ಕೋಟಿಗೂ ಹೆಚ್ಚು ಬೆಲೆಬಾಳುವ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ತಮ್ಮ ಕುಟುಂಬಕ್ಕೆ ಅಕ್ರಮವಾಗಿ ೧೪ ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದ್ದಾರೆ.