ಸಿದ್ದು ರಾಜೀನಾಮೆ ನೀಡಿ ತನಿಖೆ ಎದುರಿಸಲಿ

| Published : Aug 20 2024, 12:47 AM IST

ಸಾರಾಂಶ

ಸಿದ್ದು ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ

ಕನ್ನಡಪ್ರಭ ವಾರ್ತೆ ತುಮಕೂರುಮುಡಾ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ಹಿಂದೆ ಇಂತದ್ದೇ ಪ್ರಕರಣದಲ್ಲಿ ಯಡಿಯೂರಪ್ಪನವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರು. ಈಗ ಅವರೂ ಅದನ್ನು ಅನುಸರಿಸಲಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಒತ್ತಾಯಿಸಿದ್ದಾರೆ.ಹಿಂದೆ ಅರ್ಕಾವತಿ ಬಡಾವಣೆಯ ರೀಡೂ ಹಗರಣದಲ್ಲಿ ಜನರನ್ನು ಯಾಮಾರಿಸಿದ ರೀತಿ ಈ ಬಾರಿ ಆಗುವುದಿಲ್ಲ. ಇದರಲ್ಲಿ ಎಲ್ಲಾ ದಾಖಲೆಗಳು ಸ್ಪಷ್ಟವಾಗಿ ಕಾಣುತ್ತಿವೆ. ನಡೆದಿರುವ ಎಲ್ಲ ನಡಾವಳಿಗಳನ್ನು ಗಮನಿಸಿದರೆ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದು ಕಂಡುಬಂದಿದೆ ಎಂದರು.ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅನೇಕ ಕೋರ್ಟ್‌ಗಳು ಅನೇಕ ನಿದರ್ಶನಗಳನ್ನು ಕೊಟ್ಟಿವೆ. ಭ್ರಷ್ಟಾಚಾರದ ಸಂದರ್ಭದಲ್ಲಿ ಯಾವುದೋ ಒಂದು ಪ್ರೊಸಿಜರ್ ಎನ್ನುವುದಕ್ಕಿಂಥಾ ಭ್ರಷ್ಟಾಚಾರ ಎಂಬುದರ ಮೂಲೋತ್ಪಾಟನೆ ಆಗಬೇಕಾದ ಅಗತ್ಯವಿದೆ. ಸ್ವತ: ಸಂವಿಧಾನದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯನವರ ಮೇಲೆ ನೀಡಿದ ದೂರಿನ ತನಿಖೆ ಮಾಡದೇ ಇದ್ದಲ್ಲಿ ಸಂವಿಧಾನದ ಆಶಯ, ಜನರಲ್ಲಿ ಸಂವಿಧಾನದ ಬಗ್ಗೆ ಇರುವ ನಂಬಿಕೆ ಹೊರಟುಹೋಗುತ್ತದೆ ಎಂದು ತಿಳಿಸಿದ್ದಾರೆ.