ಸಾರಾಂಶ
ಮಾ. ೨೧ರಿಂದ ಏ. ೪ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.ಪರೀಕ್ಷೆ-೧ನ್ನು ಪಾವಿತ್ರ್ಯತೆ ಕಾಪಾಡಿಕೊಂಡು, ಅವ್ಯವಹಾರ ಅಥವಾ ಅಹಿಕರ ಘಟನೆಗಳು ನಡೆಯದಂತೆ ನಿರ್ವಹಿಸಬೇಕು. ಪರೀಕ್ಷಾ ಕೋಠಡಿಗಳಲ್ಲಿ ಉತ್ತಮ ಬೆಳಕು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕು.
ಯಲಬುರ್ಗಾ:
ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವ್ಯವಸ್ಥಿತ, ಪಾರದರ್ಶಕವಾಗಿ ನಡೆಸಬೇಕು ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.ಪಟ್ಟಣದ ಕಂದಾಯ ಭವನದಲ್ಲಿ ಶಾಲಾ ಶಿಕ್ಷಣ ವತಿಯಿಂದ ಆಯೋಜಿಸಿದ್ದ ಪರೀಕ್ಷೆ-1ರ ಮುಖ್ಯ ಅಧೀಕ್ಷಕರು, ಉಪ ಅಧೀಕ್ಷಕರು ಹಾಗೂ ಸ್ಥಾನಿಕ ಜಾಗ್ರತ ದಳದವರ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾ. ೨೧ರಿಂದ ಏ. ೪ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.ಪರೀಕ್ಷೆ-೧ನ್ನು ಪಾವಿತ್ರ್ಯತೆ ಕಾಪಾಡಿಕೊಂಡು, ಅವ್ಯವಹಾರ ಅಥವಾ ಅಹಿಕರ ಘಟನೆಗಳು ನಡೆಯದಂತೆ ನಿರ್ವಹಿಸಬೇಕು. ಪರೀಕ್ಷಾ ಕೋಠಡಿಗಳಲ್ಲಿ ಉತ್ತಮ ಬೆಳಕು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ತಾಪಂ ಇಒ ಸಂತೋಷ ಪಾಟೀಲ ಮಾತನಾಡಿ, ಪ್ರತಿ ಪರೀಕ್ಷಾ ಕೊಠಡಿ ಮತ್ತು ಮುಖ್ಯ ಅಧೀಕ್ಷಕರ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ವೆಬ್‌ಕಾಸ್ಟಿಂಗ್ ಮಾಡಲಾಗುತ್ತದೆ. ಇದಕ್ಕಾಗಿ ಪರೀಕ್ಷೆಯ ಮುಖ್ಯ ಅಧೀಕ್ಷಕರು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ವೆಬ್ ಕಾಸ್ಟಿಂಗ್ ಕುರಿತು ವಿದ್ಯಾರ್ಥಿಗಳು ಭಯ ಪಡದಂತೆ ತಿಳಿಹೇಳಬೇಕು. ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ಸ್ವಚ್ಛತೆ ಇತರ ಅಂಶಗಳನ್ನು ವ್ಯವಸ್ಥೆ ಮಾಡಿಕೊಳ್ಳುವಂತೆ ಪಿಡಿಒಗಳಿಗೆ ಸೂಚಿಸಲಾಗುವುದು ಎಂದರು.ಕ್ಷೇತ್ರ ಶಿಕ್ಷಣಾಧಿಕಾರ ಸೋಮಶೇಖರಗೌಡ ಪಾಟೀಲ ಮಾತನಾಡಿ, ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ ಈ ವರ್ಷದಲ್ಲಿ ಒಟ್ಟು ೪೫೭೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಒಟ್ಟು ತಾಲೂಕಿನಾದ್ಯಂತ ೧೪ ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿಬ್ಬಂದಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಯನ್ನು ಎಲ್ಲರೂ ಸೇರಿ ಮಾದರಿಯಾಗಿ ಮಾಡೋಣ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ಗೌಡ್ರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಜಿ. ದಾನಿ, ತಾಲೂಕು ಆರೋಗ್ಯ ಅಧಿಕಾರಿಗಳಾದ ಅಮರೇಶ, ಎಸ್‌ಎಸ್‌ಎಲ್‌ಸಿ ನೋಡೆಲ್ ಅಧಿಕಾರಿ ಮಂಜುನಾಥ ಹಳ್ಳಿ, ಬಸವರಾಜ ಅಂಗಡಿ ಇದ್ದರು.