ಸಾರಾಂಶ
ಪದವಿಯ ನಂತರದಲ್ಲಿ ಯಾವ ಕ್ಷೇತ್ರದಲ್ಲಿ ಹೆಚ್ಚು ಅಧ್ಯಯನ ಮಾಡಬೇಕೆಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಸಿಲುಕಿದ್ದಾರೆ. ನೀವು ಆಯ್ಕೆ ಮಾಡಿಕೊಂಡು ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಸಮಯವನ್ನು ಸದುಪಯೋಗ ಪಡಿಸಿಕೊಂಡರೆ ಉತ್ತಮವಾದ ಜ್ಞಾನವನ್ನು ಹೊಂದಬಹುದಾಗಿದ್ದು, ಜೀವನದಲ್ಲಿ ಅಡೆತಡೆಗಳು ಸಾಕಷ್ಟು ಬರುತ್ತವೆ. ಅವುಗಳನ್ನು ಮೆಟ್ಟಿ ನಿಂತು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕೆಂದರು.
ಹೂವಿನಹಡಗಲಿ: ವಿದ್ಯಾರ್ಥಿಗಳು ಕೇವಲ ಪದವಿಗಳನ್ನು ಪಡೆಯುವುದರಲ್ಲಿ ತಲೀನರಾಗದೇ, ವೃತ್ತಿ ಕೌಶಲ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ಪ್ರಾಧ್ಯಾಪಕ ವಸಂತಕುಮಾರ ತಿಳಿಸಿದರು.
ಪಟ್ಟಣದ ಜಿಬಿಆರ್ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಯೋಗದಲ್ಲಿ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಆಯೋಜಿಸಿದ್ದ 2023 ವಿಶೇಷ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಪದವಿಯ ನಂತರದಲ್ಲಿ ಯಾವ ಕ್ಷೇತ್ರದಲ್ಲಿ ಹೆಚ್ಚು ಅಧ್ಯಯನ ಮಾಡಬೇಕೆಂಬ ಗೊಂದಲದಲ್ಲಿ ವಿದ್ಯಾರ್ಥಿಗಳು ಸಿಲುಕಿದ್ದಾರೆ. ನೀವು ಆಯ್ಕೆ ಮಾಡಿಕೊಂಡು ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಸಮಯವನ್ನು ಸದುಪಯೋಗ ಪಡಿಸಿಕೊಂಡರೆ ಉತ್ತಮವಾದ ಜ್ಞಾನವನ್ನು ಹೊಂದಬಹುದಾಗಿದ್ದು, ಜೀವನದಲ್ಲಿ ಅಡೆತಡೆಗಳು ಸಾಕಷ್ಟು ಬರುತ್ತವೆ. ಅವುಗಳನ್ನು ಮೆಟ್ಟಿ ನಿಂತು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕೆಂದರು.ಉಪನ್ಯಾಸಕ ಜಾವಿದ್ ಭಾಷಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕ ಬಿ. ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎಸ್.ಎಸ್. ಪಾಟೀಲ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ವೈ. ಚಂದ್ರಬಾಬು, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಸದಾಶಿವ, ಉಪನ್ಯಾಸಕ ಶೇಖ್ ಷಾವಲಿ, ಅನ್ನದಾನಪ್ಪ, ಉಪನ್ಯಾಸಕಿಯರಾದ ಆಶಾ, ಸಿಂಧೂ, ಅಶ್ವಿನಿ ಹಾಗೂ ಇತರ ಉಪನ್ಯಾಸರು ಮತ್ತು ವಿದ್ಯಾರ್ಥಿಗಳು ಇದ್ದರು.